ದಸರಾ ವೇಳೆಗೆ ಈರುಳ್ಳಿ ಬೆಲೆ ಮತ್ತಷ್ಟು ದುಬಾರಿ ಸಾಧ್ಯತೆ

Ravi Talawar
ದಸರಾ ವೇಳೆಗೆ ಈರುಳ್ಳಿ ಬೆಲೆ ಮತ್ತಷ್ಟು ದುಬಾರಿ ಸಾಧ್ಯತೆ
WhatsApp Group Join Now
Telegram Group Join Now

ಬೆಂಗಳೂರು, ಸೆಪ್ಟೆಂಬರ್ 18: ದಿನದಿಂದ ದಿನಕ್ಕೆ ಸಾಮಾನ್ಯ ಜನರ ಬದುಕು ದುಬಾರಿಯಾಗುತ್ತಿದೆ. ಅಗತ್ಯ ವಸ್ತುಗಳ‌ ಬೆಲೆ‌ ಏರಿಕೆಯಾಗುತ್ತಿದ್ದು, ಬಡವರು ಮಧ್ಯಮ ವರ್ಗದವರು ಜೀವನ ನಡೆಸುವುದೇ ಕಷ್ಟವಾಗಿ ಹೋಗಿದೆ.‌ ಈ ಮಧ್ಯೆ ಈರುಳ್ಳಿ ಬೆಲೆ ಏರಿಕೆಯಾಗಿದ್ದು, ಗ್ರಹಾಕರಿಗೆ ಕಣ್ಣೀರು ತರಿಸುತ್ತಿದೆ. ಸದ್ಯ ಕರ್ನಾಟಕದ ಹಲವೆಡೆ ಅತಿಯಾದ ಮಳೆಯ ಕಾರಣ ಬೆಳೆ ನೀರು‌ಪಾಲಗುತ್ತಿದ್ದರೆ, ಮತ್ತೊಂದೆಡೆ ಈರುಳ್ಳಿ ಮಳೆಯಿಂದಾಗಿ ಇಟ್ಟಲ್ಲೇ ಕೊಳೆತು ಹೋಗುತ್ತಿದೆ. ಹೀಗಾಗಿ ಹಬ್ಬದ ವಾರದಲ್ಲಿ 50 ರೂ. ಇದ್ದ ಈರುಳ್ಳಿಯ ಬೆಲೆ ಇದೀಗ 60 ರಿಂದ 70 ರೂಪಾಯಿ ಆಗಿದೆ.

Contents
ಈರುಳ್ಳಿ ಉತ್ಪಾದನೆ ಭಾರಿ ಕುಸಿತ: ರಾಜ್ಯದಲ್ಲಿ ಹೆಚ್ಚು ಮಳೆಯಾಗುತ್ತಿರುವ ಪರಿಣಾಮ ಈರುಳ್ಳಿಯ ಉತ್ಪಾದನೆಯಲ್ಲಿ ಭಾರಿ ಕುಸಿತವಾಗಿದೆ. ಹೀಗಾಗಿ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬರುತ್ತಿಲ್ಲ.‌ ಪರಿಣಾಮವಾಗಿ ಪೂರೈಕೆ ಕೂಡ ಕಡಿಮೆಯಾಗಿದೆ. ಸದ್ಯ ರಾಜ್ಯಕ್ಕೆ ಪುಣೆ, ಮಹಾರಾಷ್ಟ್ರದಿಂದ ಈರುಳ್ಳಿ ತರುಹಿಸಿಕೊಳ್ಳಲಾಗುತ್ತಿದೆ.ದಸರಾ ವೇಳೆಗೆ ಈರುಳ್ಳಿ ಬೆಲೆ ಮತ್ತಷ್ಟು ದುಬಾರಿ ಸಾಧ್ಯತೆ: ದಸರಾ ವೇಳೆಗೆ ಈರುಳ್ಳಿಯ ಬೆಲೆ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ ಇದೆ. ಈ ಹಿಂದೆ ಉತ್ತರ ಕರ್ನಾಟಕ ಭಾಗದಿಂದ ಈರುಳ್ಳಿ ರಾಜ್ಯಕ್ಕೆ ಪೂರೈಕೆಯಾಗುತ್ತಿತ್ತು. ಆದರೆ, ಈಗ ಉತ್ತರ ಕರ್ನಾಟಕದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಮಳೆಗೆ ಈರುಳ್ಳಿ ಕೊಳೆತು ಹೋಗುತ್ತಿದೆ. ಹೀಗಾಗಿ ಈರುಳ್ಳಿ ಪೂರೈಕೆ ಕಡಿಮೆಯಾಗಿದೆ.

ಈರುಳ್ಳಿ ಉತ್ಪಾದನೆ ಭಾರಿ ಕುಸಿತ: ರಾಜ್ಯದಲ್ಲಿ ಹೆಚ್ಚು ಮಳೆಯಾಗುತ್ತಿರುವ ಪರಿಣಾಮ ಈರುಳ್ಳಿಯ ಉತ್ಪಾದನೆಯಲ್ಲಿ ಭಾರಿ ಕುಸಿತವಾಗಿದೆ. ಹೀಗಾಗಿ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬರುತ್ತಿಲ್ಲ.‌ ಪರಿಣಾಮವಾಗಿ ಪೂರೈಕೆ ಕೂಡ ಕಡಿಮೆಯಾಗಿದೆ. ಸದ್ಯ ರಾಜ್ಯಕ್ಕೆ ಪುಣೆ, ಮಹಾರಾಷ್ಟ್ರದಿಂದ ಈರುಳ್ಳಿ ತರುಹಿಸಿಕೊಳ್ಳಲಾಗುತ್ತಿದೆ.

ದಸರಾ ವೇಳೆಗೆ ಈರುಳ್ಳಿ ಬೆಲೆ ಮತ್ತಷ್ಟು ದುಬಾರಿ ಸಾಧ್ಯತೆ: ದಸರಾ ವೇಳೆಗೆ ಈರುಳ್ಳಿಯ ಬೆಲೆ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ ಇದೆ. ಈ ಹಿಂದೆ ಉತ್ತರ ಕರ್ನಾಟಕ ಭಾಗದಿಂದ ಈರುಳ್ಳಿ ರಾಜ್ಯಕ್ಕೆ ಪೂರೈಕೆಯಾಗುತ್ತಿತ್ತು. ಆದರೆ, ಈಗ ಉತ್ತರ ಕರ್ನಾಟಕದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಮಳೆಗೆ ಈರುಳ್ಳಿ ಕೊಳೆತು ಹೋಗುತ್ತಿದೆ. ಹೀಗಾಗಿ ಈರುಳ್ಳಿ ಪೂರೈಕೆ ಕಡಿಮೆಯಾಗಿದೆ.

 

WhatsApp Group Join Now
Telegram Group Join Now
Share This Article