ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಕಾರ್ಯಾಚರಣೆ

Ravi Talawar
ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಕಾರ್ಯಾಚರಣೆ
WhatsApp Group Join Now
Telegram Group Join Now

ಬಳ್ಳಾರಿ,ಸೆ.02ನಮ್ಮ ಸುತ್ತ-ಮುತ್ತಲಿನ ಶೈಕ್ಷಣಿಕ ಸಂಸ್ಥೆಗಳ 100 ಮೀಟರ್ ಅಂತರದಲ್ಲಿ ಯಾವುದೇ ರೀತಿಯ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಮರಿಯಂಬಿ.ವಿ.ಕೆ ಅವರು ಹೇಳಿದರು.

ಸೋಮವಾರದಂದು ಬಳ್ಳಾರಿ ಗ್ರಾಮೀಣ ಭಾಗದ ದಾರಾಮೀಲ್, ಅಲ್ಲಿಪುರ, ಬಿಐಟಿಎಂ ಕಾಲೇಜಿನ ಸುತ್ತ ಮುತ್ತಲಿನ ಪ್ರದೇಶದ ಅಂಗಡಿಗಳ ಮೇಲೆ ಕಾರ್ಯಾಚರಣೆ ನಡೆಸಿ ಅವರು ಮಾತನಾಡಿದರು.

ಸಾರ್ವಜನಿಕ ಸ್ಥಳಗಳನ್ನು ಧೂಮಪಾನ ಮುಕ್ತವನ್ನಾಗಿ ಇರಿಸಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದರು.

ಅಪ್ರಾಪ್ತ ಮಕ್ಕಳಿಂದ ಉತ್ಪಾದನೆ, ಸೇವನೆ ಮತ್ತು ಮಾರಾಟ ಮಾಡಿಸುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಒಂದು ವೇಳೆ ಅಪರಾಧ ಕಂಡುಬAದಲ್ಲಿ ಅದರ ಹೊಣೆಗಾರಿಕೆಯನ್ನು ಅಂಗಡಿಯ ಮಾಲೀಕರಿಗೆ ವಿಧಿಸಲಾಗುವುದು ಎಂದು ಎಚ್ಚರಿಸಿದರು.

ಬಳಿಕ ಕೋಟ್ಟಾ ಕಾಯ್ದೆಯ 2003ರ ಉಲ್ಲಂಘನೆ ಮಾಡಿ ಮಾರಾಟ ಮಾಡುತ್ತಿದ್ದ 21 ಅಂಗಡಿಗಳ ಮೇಲೆ ದಾಳಿ ಮಾಡಿ ದಂಡ ವಿಧಿಸಲಾಯಿತು.
ಎರಡು ಅಂಗಡಿಗಳ ಮುಂಭಾಗದಲ್ಲಿ ಇರಿಸಿದ್ದ ತಂಬಾಕು ಸೇವನೆಗೆ ಉತ್ತೇಜನ ನೀಡುವಂತಹ ಬೋರ್ಡ್ಗಳನ್ನು ತೆಗೆಸಲಾಯಿತು.

ಈ ಸಂದರ್ಭದಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಗೋವಿಂದಪ್ಪ, ಜಿಲ್ಲಾ ತಂಬಾಕು ಸಲಹೆಗಾರರಾದ ಪ್ರಶಾಂತ್, ಸಮಾಜ ಕಾರ್ಯಕರ್ತರಾದ ಸರಸ್ವತಿ, ಪೊಲೀಸ್ ಇಲಾಖೆ ಸಿಬ್ಬಂದಿ ಶರಣಪ್ಪ, ಗೃಹರಕ್ಷಕ ಭೀಮಾ ಹಾಜರಿದ್ದರು.

WhatsApp Group Join Now
Telegram Group Join Now
Share This Article