ಗದಗ, ಆಗಸ್ಟ್ 07: ಏಪ್ರಿಲ್ 22ರಂದು ಪಹಲ್ಗಾಮ್ನಲ್ಲಿ ಉಗ್ರರು ಮಾಡಿದ್ದ ದಾಳಿಯಲ್ಲಿ ಕರ್ನಾಟಕ ಸೇರಿದಂತೆ 26 ಪ್ರವಾಸಿಗರು ಸಾವನ್ನಪ್ಪಿದ್ದರು. ಬಳಿಕ ಭಾರತೀಯ ಸೇನೆ ಮೇ 7ರಂದು ‘ಆಪರೇಶನ್ ಸಿಂಧೂರ’ಕಾರ್ಯಾಚರಣೆ ನಡೆಸಿ ಪಾಕಿಸ್ತಾನದಲ್ಲಿದ್ದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸುವಲ್ಲಿ ಯಶಸ್ವಿಯಾಗಿತ್ತು. ಪ್ರಧಾನಿ ಮೋದಿ ಆಪರೇಶನ್ ಸಿಂಧೂರವನ್ನು ದೇಶದ ಹೆಣ್ಣುಮಕ್ಕಳಿಗೆ ಸಮರ್ಪಿಸಿದ್ದರು. ಇದೀಗ ಇದೇ ಆಪರೇಶನ್ ಸಿಂಧೂರ ಹೆಸರಿನಲ್ಲಿ ಗದಗಿನನೇಕಾರರೊಬ್ಬರು ಕೈಮಗ್ಗದಲ್ಲಿ ಸೀರೆ ಸಿದ್ಧಪಡಿಸುವ ಮೂಲಕ ಗಮನ ಸೆಳೆದಿದ್ದಾರೆ.
ಸೀರೆಯಲ್ಲಿ ಅರಳಿದ ಆಪರೇಶನ್ ಸಿಂಧೂರ

ಆಪರೇಶನ್ ಸಿಂಧೂರ ಹೆಸರಲಿನಲ್ಲಿ ಸೀರೆ ಸಿದ್ಧಪಡಿಸುವ ಕಲ್ಪನೆ ನೇಕಾರ ತೇಜಪ್ಪ ಚಿನ್ನೂರ್ ಅವರದ್ದು. ತೇಜಪ್ಪ ಚಿನ್ನೂರ್ ಅವರು ಗದಗ ಜಿಲ್ಲೆಯ ಗಜೇಂದ್ರಗಡದ ನೇಕಾರರು. ಆಪರೇಶನ್ ಸಿಂಧೂರ ಹೆಸರಲಿನಲ್ಲಿ ಕೈಮಗ್ಗದಲ್ಲಿ ಸೀರೆ ತಯಾರಿಸಿದ್ದಾರೆ. ಆ ಮೂಲಕ ಅವರು ತಮ್ಮ ಕಾಯಕದಿಂದಲೇ ಭಾರತೀಯ ಸೇನೆ ಕಾರ್ಯಾಚರಣೆಗೆ ಗೌರವ ಸೂಚಿಸಿದ್ದಾರೆ.