ಬರ ಪರಿಹಾರ ರೈತರ  ಖಾತೆಯಲ್ಲಿ ಜಮೆಯಾಗಿಲ್ಲ: ವಿಪಕ್ಷ ನಾಯಕ ಆರ್​ ಅಶೋಕ್ ಆಕ್ರೋಶ

Ravi Talawar
ಬರ ಪರಿಹಾರ ರೈತರ  ಖಾತೆಯಲ್ಲಿ ಜಮೆಯಾಗಿಲ್ಲ: ವಿಪಕ್ಷ ನಾಯಕ ಆರ್​ ಅಶೋಕ್ ಆಕ್ರೋಶ
WhatsApp Group Join Now
Telegram Group Join Now

ಬೆಂಗಳೂರು, ಮೇ 28: ಸಾಕಷ್ಟು ಹಗ್ಗ-ಜಗ್ಗಾಟ, ಕಾನೂನು ಹೋರಾಟ ಮಾಡಿ ರಾಜ್ಯ ಸರ್ಕಾರ   ಕೇಂದ್ರ ಸರ್ಕಾರದಿಂದ ಬರ ಪರಿಹಾರ  ತರುವಲ್ಲಿ ಯಶ್ವಿಸಿ ಆಗಿದೆ. ಕೇಂದ್ರ ಸರ್ಕಾರ  ರಾಜ್ಯಕ್ಕೆ ಬರ ಪರಿಹಾರ ನೀಡಿ ಕೈ ತೊಳೆದುಕೊಂಡಿದೆ. ಆದರೆ, ರಾಜ್ಯ ಸರ್ಕಾರದ ಖಾತೆಗೆ ಬಂದ ಬರ ಪರಿಹಾರ ರೈತರ  ಖಾತೆಯಲ್ಲಿ ಜಮೆಯಾಗಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ವಿಪಕ್ಷ ನಾಯಕ ಆರ್​ ಅಶೋಕ್ ಟ್ವೀಟ್​ ಮಾಡಿ, ​”ದೇವರು ಕೊಟ್ಟರೂ ಪೂಜಾರಿ ಕೊಡಲಿಲ್ಲ” ಎಂದು ವ್ಯಂಗ್ಯವಾಡಿದಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ರೈತರ ಬರ ಪರಿಹಾರಕ್ಕಾಗಿ 3,454 ಕೋಟಿ ರೂಪಾಯಿ ಬಿಡುಗಡೆ ಮಾಡಿ ಒಂದು ತಿಂಗಳ ಕಳೆದರೂ, ಈ ರೈತ ವಿರೋಧಿ ಕಾಂಗ್ರೆಸ್​ ಸರ್ಕಾರ ಅದನ್ನು ರೈತರ ಬ್ಯಾಂಕ್ ಖಾತೆಗೆ ಹಾಕದೆ ಸತಾಯಿಸುತ್ತಿದೆ. ಒಟ್ಟಿನಲ್ಲಿ ಈ ದರಿದ್ರ ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ನಾಡಿನ ಅನ್ನದಾತರಿಗೆ ನೆಮ್ಮದಿಯಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“10 ಕೆಜಿ ಅಕ್ಕಿ ಬದಲು ಪ್ರತಿ ಕೆಜಿ ಅಕ್ಕಿಗೆ ₹34 ನೀಡುತ್ತೇವೆಂದು ಹೇಳಿದ್ದ ಸಿಎಂ ಸಿದ್ದರಾಮಯ್ಯ ಅವರು, ಅಕ್ಕಿ ಬದಲು ನೀಡುತ್ತಿದ್ದ ದುಡ್ಡನ್ನು ಕಳೆದ ಮೂರು ತಿಂಗಳಿಂದ ಬಾಕಿ ಉಳಿಸಿಕೊಂಡು ಕನ್ನಡಿಗರಿಗೆ ಪಂಗನಾಮ ಹಾಕಿದ್ದಾರೆ.”

“ಕಳೆದ ಒಂದು ವರ್ಷದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್​ ಸರ್ಕಾರ ಸರಿಯಾಗಿ ಜಾರಿಗೊಳಿಸಿದ ಏಕೈಕ ಗ್ಯಾರಂಟಿ ಯಾವುದಾದರೂ ಇದ್ದರೆ ಅದು ಸುಳ್ಳು ಹೇಳುವುದು, ಕನ್ನಡಿಗರ ಕಿವಿ ಮೇಲೆ ಹೂವಿಟ್ಟು ಏಮಾರಿಸುವ ಗ್ಯಾರಂಟಿ ಮಾತ್ರ” ಎಂದು ವಾಗ್ದಾಳಿ ಮಾಡಿದ್ದಾರೆ.

WhatsApp Group Join Now
Telegram Group Join Now
Share This Article