ಬೆಂಗಳೂರು, ಸೆಪ್ಟೆಂಬರ್ 23: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಕಾವೇರಿ ಆರತಿ ಅಧ್ಯಯನ ಸಮಿತಿ ಈಗಾಗಲೆ ಹರಿದ್ವಾರಕ್ಕೆ ತೆರಳಿ ಗಂಗಾರತಿ ಪ್ರಕ್ರಿಯೆ ಬಗ್ಗೆ ಅಧ್ಯಯನ ಮಾಡಿಕೊಂಡು ಬಂದಿದೆ. ಇದೀಗ ಅಧಿಕಾರಿಗಳ ನಿಯೋಗ ಅಧ್ಯಯನಕ್ಕೆಂದು ಹರಿದ್ವಾರಕ್ಕೆ ತೆರಳು ಸಜ್ಜಾಗಿದೆ ಎಂದು ವರದಿಯಾಗಿದೆ. ಈ ವಿಚಾರವಾಗಿ ವಿಪಕ್ಷ ನಾಯಕ ಆರ್ ಅಶೋಕ್ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
“ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ನಡೆಸುವ ಸಲುವಾಗಿ ಮಂಡ್ಯ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಂಡ್ಯ, ಮೈಸೂರು ಭಾಗದ ಶಾಸಕರು, ವಿಧಾನಪರಿಷತ್ ಸದಸ್ಯರು, ಕಾವೇರಿ ಅಭಿವೃದ್ಧಿ ನಿಗಮದ ಹಿರಿಯ ಅಧಿಕಾರಿಗಳು ಈಗಾಗಲೇ ಮೂರು ದಿನಗಳ ಕಾಲ ಹರಿದ್ವಾರ ಹಾಗೂ ಕಾಶಿಗೆ ಭೇಟಿ ನೀಡಿ ಅಧ್ಯಯನ ನಡೆಸಿ ಬಂದಿರುವಾಗ ಈಗ ಮತ್ತೊಮ್ಮೆ ಅಧಿಕಾರಿಗಳ ನಿಯೋಗ ಕಳುಹಿಸುತ್ತಿರುವುದು ಯಾತಕ್ಕೆ?” ಎಂದು ಸಾಮಾಜಿಕ ಮಾಧ್ಯಮ ಎಕ್ಸ್ ಮುಖಾಂತರ ಪ್ರಶ್ನಿಸಿದ್ದಾರೆ.
ಈಗ ಮತ್ತೊಮ್ಮೆ ಅಧಿಕಾರಿಗಳ ನಿಯೋಗ ಹೋಗಬೇಕು ಎನ್ನುವುದಾದರೆ ಸಚಿವರು ತಮ್ಮ ತಂಡದೊಂದಿಗೆ ಅಲ್ಲಿ ಹೋಗಿ ಮಾಡಿದ್ದಾದರೂ ಏನು? ಸರ್ಕಾರಿ ಹಣದಲ್ಲಿ ಮೋಜು-ಮಸ್ತಿ ಮಾಡಲು ಹೋಗಿದ್ದಾ? ಎಂದು ವಾಗ್ದಾಳಿ ಮಾಡಿದ್ದಾರೆ.