ನವದೆಹಲಿ: ಪ್ರಯಾಗರಾಜ್ನಲ್ಲಿ ನಡೆದ ಮಹಾಕುಂಭ ಉತ್ಸವದಲ್ಲಿ 30 ಜನರು ಸಾವನ್ನಪ್ಪಿ, 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದ ಕಾಲ್ತುಳಿತದ ಬಗ್ಗೆ ಚರ್ಚಿಸಬೇಕೆಂದು ಒತ್ತಾಯಿಸಿ ವಿರೋಧ ಪಕ್ಷದ ಸಂಸದರು ಇಂದು ಸಂಸತ್ತಿನಲ್ಲಿ ಘೋಷಣೆಗಳನ್ನು ಕೂಗಿದರು.
ಕೋಪಗೊಂಡ ವಿಪಕ್ಷಗಳ ಸಂಸದರು ಕುಂಭ ಮೇಳದ ದುರಂತಕ್ಕೆ ಉತ್ತರ ಬೇಕು ಎಂದು ಸದನದ ಬಾವಿಗಿಳಿದು ಘೋಷಣೆ ಕೂಗತೊಡಗಿದರು. ಕಾಲ್ತುಳಿತದಲ್ಲಿ ಮೃತಪಟ್ಟವರನ್ನು ಗುರುತಿಸುವ ಪಟ್ಟಿಯನ್ನು ನೀಡುವಂತೆ ವಿರೋಧ ಪಕ್ಷದ ಸಂಸದರು ಒತ್ತಾಯಿಸಿದರು.
ನೀವು 30 ಜನ ಮೃತಪಟ್ಟಿದ್ದಾರೆ ಎಂದು ಹೇಳುತ್ತಿದ್ದೀರಿ. ಆದರೆ, ಈ ಸಂಖ್ಯೆ ಇನ್ನೂ ಹೆಚ್ಚಾಗಿದೆ. ಈ ಘಟನೆಯ ನಂತರ ಹಲವು ಗಂಟೆಗಳ ಕಾಲ ಸಾವುಗಳನ್ನು ದೃಢೀಕರಿಸಲು ಸಮಯ ತೆಗೆದುಕೊಂಡ ಉತ್ತರ ಪ್ರದೇಶ ಸರ್ಕಾರವು ನಿಜವಾದ ಸಾವಿನ ಸಂಖ್ಯೆಯನ್ನು ಮರೆಮಾಡುತ್ತಿದೆ ಎಂದು ಅವರು ಟೀಕಿಸಿದ್ದಾರೆ.