ಇಂದು ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಕೂಡ ಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.
ಶಿರಾಲಿ, ಮಂಕಿ, ಕುಂದಾಪುರ, ಗೇರುಸೊಪ್ಪ, ಮಂಠಾಳ, ಉಡುಪಿ, ಕೋಟ, ಗೋಕರ್ಣ, ಅಂಕೋಲಾ, ಹೊನ್ನಾವರ, ಕಾರ್ಕಳ, ಆಗುಂಬೆ, ಭಾಗಮಂಡಲ, ಶೃಂಗೇರಿ, ಸಿದ್ದಾಪುರ, ಕುಮಟಾ, ಹುಣಸಗಿ, ಯಡವಾಡ, ವಿರಾಜಪೇಟೆ, ಪಣಂಬೂರು, ಧರ್ಮಸ್ಥಳ, ಉಪ್ಪಿನಂಗಡಿ, ಮುಲ್ಕಿ, ಜೇವರ್ಗಿ, ರೋಣ, ಬಾದಾಮಿಯಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮೋಡಕಿವಿದ ವಾತಾವರಣವಿದ್ದು ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.