ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ತುಮಕೂರು, ವಿಜಯನಗರ, ಕೊಡಗು, ಹಾನಸ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರಿನಲ್ಲೂ ಮಳೆಯಾಗಲಿದೆ.ಯಾದಗಿರಿ, ವಿಜಯಪುರ, ಕಲಬುರಗಿ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಗದಗದಲ್ಲಿ ಒಣಹವೆ ಇರಲಿದ್ದು,ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮಂಗಳವಾರ ಬೆಳಗಿನ ಜಾವ ಮಳೆಯಾಗಿದೆ, ಎಚ್ಎಎಲ್ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಯಲ್ಪಾಡು, ಬೆಂಗಳೂರು ನಗರ, ಕೊಳ್ಳೇಗಾಲ, ಸಿದ್ದಾಪುರ, ಹಗರಿಬೊಮ್ಮನಹಳ್ಳಿ, ದೇವನಹಳ್ಳಿ, ಗೋಕರ್ಣ, ಬಾಳೆಹೊನ್ನೂರು, ಹೊಸಕೋಟೆ, ಕ್ಯಾಸಲ್ರಾಕ್, ಹುಣಸೂರು, ಗುಂಡ್ಲುಪೇಟೆ, ಆಗುಂಬೆ, ಭಾಗಮಂಡಲ, ರಾಮನಗರ, ಕೋಲಾರ, ಕೆಆರ್ನಗರದಲ್ಲಿ ಮಳೆಯಾಗಿದೆ.
ಹೊನ್ನಾವರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.