ಬಳ್ಳಾರಿ,ಆ.15ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
*ತಾಲ್ಲೂಕು ಮಟ್ಟದ ಕ್ರೀಡಾಕೂಟ ವೇಳಾಪಟ್ಟಿ:*
ಆ.20 ರಂದು ಬೆಳಿಗ್ಗೆ 10.30 ಗಂಟೆಗೆ ಸಂಡೂರಿನ ತಾಲ್ಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಆ.22 ರಂದು ಬೆಳಿಗ್ಗೆ 10.30 ಗಂಟೆಗೆ ಕಂಪ್ಲಿ ತಾಲ್ಲೂಕಿನ ಎಮ್ಮಿಗನೂರಿನ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಏರ್ಪಡಿಸಲಾಗಿದೆ.
ಆ.23 ರಂದು ಬೆಳಿಗ್ಗೆ 10.30 ಗಂಟೆಗೆ ಕುರುಗೋಡು ತಾಲ್ಲೂಕಿನ ದಮ್ಮೂರಿನ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಆ.25 ರಂದು ಬೆಳಿಗ್ಗೆ 10.30 ಗಂಟೆಗೆ ಸಿರುಗುಪ್ಪದ ತಾಲ್ಲೂಕು ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ. ಆ.29 ರಂದು ಬೆಳಿಗ್ಗೆ 10.30 ಗಂಟೆಗೆ ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.
*ಸೂಚನೆ:*
ಕ್ರೀಡಾಕೂಟದಲ್ಲಿ ಆಯಾ ತಾಲ್ಲೂಕಿನ ಪುರಷ ಮತ್ತು ಮಹಿಳಾ ಕ್ರೀಡಾಪಟುಗಳು ಅಥ್ಲೆಟಿಕ್ಸ್, ವಾಲಿಬಾಲ್, ಕಬಡ್ಡಿ, ಖೋ-ಖೋ, ಫುಟ್ಬಾಲ್(ಪುರುಷರಿಗೆ ಮಾತ್ರ), ಥ್ರೋಬಾಲ್, ಯೋಗ ಕ್ರೀಡೆಗಳಲ್ಲಿ ಭಾಗವಹಿಸಬಹುದು.
ತಾಲ್ಲೂಕು ದಸರಾ ಸ್ಪರ್ಧೆಗಳಲ್ಲಿ ಆಯಾ ತಾಲ್ಲೂಕು ಕ್ರೀಡಾಪಟುಗಳು ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ. ಕ್ರೀಡಾಪಟುಗಳು ಪ್ರತಿನಿಧಿಸುವ ತಾಲ್ಲೂಕು ದೃಢೀಕರಣದ ಬಗ್ಗೆ ದಾಖಲೆಗಳನ್ನು ಸಲ್ಲಿಸಬೇಕು. ಬೇರೆ ಜಿಲ್ಲೆಯ ಕ್ರೀಡಾಪಟುಗಳು ಭಾಗವಹಿಸಲು ಅವಕಾಶ ಇರುವುದಿಲ್ಲ.
ನೋಂದಣಿ ಸಮಯದಲ್ಲಿ ಕಡ್ಡಾಯವಾಗಿ ಶಾಲಾ / ಕಾಲೇಜಿನ ಗುರುತಿನ ಚೀಟಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಮತದಾರರ ಗುರುತಿನ ಚೀಟಿ ಹಾಗೂ ಸರ್ಕಾರದಿಂದ ಅಧಿಕೃತ ಇರುವ ಇತರೆ ಗುರುತಿನ ಚೀಟಿಯೊಂದಿಗೆ ಹಾಜರಾಗಬೇಕು.
ಕ್ರೀಡಾಪಟುಗಳು ಒಂದೊಮ್ಮೆ ವಿದ್ಯಾಭ್ಯಾಸ ಅಥವಾ ಸೇವೆಯಲ್ಲಿದ್ದರೆ ಸಂಬAಧಪಟ್ಟ ಕಾಲೇಜು-ಸಂಸ್ಥೆಗಳ ಗುರುತಿನ ಚೀಟಿಯೊಡನೆ ಭಾಗವಹಿಸಲು ಅವಕಾಶ ಇರುತ್ತದೆ.
ಪ್ರಸಕ್ತ ಸಾಲಿನ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳನ್ನು ತಾಲ್ಲೂಕು, ಜಿಲ್ಲೆ ಮತ್ತು ವಿಭಾಗ ಮಟ್ಟದವರಿಗೆ Dasara CM Cup 2025 Sports Registration QR Code ನಲ್ಲಿ ನೋಂದಣಿ ಕಡ್ಡಾಯವಾಗಿ ಮಾಡಿಕೊಳ್ಳಬೇಕು. ತಪ್ಪಿದಲ್ಲಿ ದಸರಾ ಕ್ರೀಡಾ ಕೂಟದಲ್ಲಿ ಭಾಗವಹಿಸಿಲು ಅವಕಾಶ ಇರುವುದಿಲ್ಲ.
ತಾಲ್ಲೂಕು ಮಟ್ಟದಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಮತ್ತು ಗುಂಪು ಆಟಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಲು ಅವಕಾಶ ಇರುತ್ತದೆ. ವಿವಿಧ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳಲ್ಲಿ ಭಾಗವಹಿಸಲು ಕರ್ನಾಟಕ ರಾಜ್ಯದಲ್ಲಿ ವಾಸಿಸುವ ಕ್ರೀಡಾಪಟುಗಳಿಗೆ ಮಾತ್ರ ಅರ್ಹರಿರುತ್ತಾರೆ.
ಕ್ರೀಡಾ ಕೂಟದಲ್ಲಿ ರಕ್ಷಣಾ ಪಡೆ, ಅರೆ ರಕ್ಷಣಾ ಪಡೆ ಸೇರಿದ ಕ್ರೀಡಾಪಟುಗಳು ಭಾಗವಹಿಸಲು ಅರ್ಹರರಲ್ಲ. ತಾಲ್ಲೂಕು ಮಟ್ಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಪ್ರಯಾಣ ಭತ್ಯೆ ನೀಡಲಾಗುವುದಿಲ್ಲ. ಒಂದು ಕ್ರೀಡಾಪಟು ಕೇವಲ ಒಂದು ಗುಂಪು ಕ್ರೀಡೆಯಲ್ಲಿ ಮಾತ್ರ ಭಾಗವಹಿಸಲು ಅವಕಾಶ ಇರುತ್ತದೆ.
ಹೆಚ್ಚಿನ ವಿವರಗಳಿಗಾಗಿ ತರಬೇತುದಾರರಾದ ಎಂ.ಜಾಕೀರ್ ಮೊ.9036335986, ಮಹ್ಮದ್ ಮಸೂದ್ ಮೊ.9886688858, ಕಚೇರಿ ಸಿಬ್ಬಂದಿ ಮೊ.8971238689 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.