ಪದ್ಮಭೂಷಣ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನ

Ravi Talawar
ಪದ್ಮಭೂಷಣ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನ
WhatsApp Group Join Now
Telegram Group Join Now

ಬೆಂಗಳೂರು, (ಸೆಪ್ಟೆಂಬರ್ 24): ಪದ್ಮಭೂಷಣ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ಇಂದು(ಸೆಪ್ಟೆಂಬರ್ 24) ಕೊನೆಯುಸಿರೆಳೆದಿದ್ದಾರೆ.  ವಯೋಸಹಜ ಕಾಯಿಲೆ ಬಳಲುತ್ತಿದ್ದ ಬೈರಪ್ಪ ಅವರು ಮರುವಿನ ಕಾಯಿಲೆ ಸಹ ಇತ್ತು. ಹೀಗಾಗಿ ಅವರು 3 ತಿಂಗಳಿನಿಂದ ಮೈಸೂರು ಬಿಟ್ಟು ಬೆಂಗಳೂರಿನಲ್ಲಿ ವಾಸವಾಗಿದ್ದರು. 94 ವರ್ಷದ ಹಿರಿಯ ಸಾಹಿತಿ ಎಸ್​ ಎಲ್​ ಭೈರಪ್ಪ ಅವರು ಒಬ್ಬ ಪ್ರಸಿದ್ಧ ಕನ್ನಡ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಲೇಖಕರಾಗಿದ್ದು, 2023ರಲ್ಲಿ ಇವರಿಗೆ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು,

ಭೈರಪ್ಪ ಅವರು ಪರ್ವ, ಆವರಣ, ಗೃಹಭಂಗ ಸೇರಿದಂತೆ ಅನೇಕ ಕಾದಂಬರಿಗಳನ್ನು ಬರೆದಿದ್ದಾರೆ. ಭೈರಪ್ಪ ಅವರು ಹಾಸನ ಜಿಲ್ಲೆಯ ಸಂತೇಶಿವಾರ ಗ್ರಾಮದವರು. ತಮ್ಮ ಸ್ವಗ್ರಾಮದ ಕೆರೆಗಳಿಗೆ ನೀರು ತುಂಬಿಸಲು ಕೂಡ ಶ್ರಮಿಸಿದ್ದರು. ಬಾಲ್ಯದಲ್ಲಿ ಕಷ್ಟದಲ್ಲೇ ಬೆಳೆದು ವಿದ್ಯಾಭ್ಯಾಸ ಮಾಡಿದ್ದರು. ಮೈಸೂರಿನಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು ಪ್ರಧಾನಿ ಮೋದಿ ಅವರನ್ನು ಬೆಂಬಲಿಸುತ್ತಿದ್ದರು. ಭೈರಪ್ಪ ಅವರಿಗೆ ಜ್ಞಾನಪೀಠ ಪ್ರಶಸ್ತಿ ನೀಡಬೇಕೆಂದು ಅವರ ಓದುಗ ಅಭಿಮಾನಿಗಳು ಒತ್ತಾಯಿಸುತ್ತಿದ್ದರು. ಆದ್ರೆ, ಜ್ಞಾನಪೀಠ ಪ್ರಶಸ್ತಿಗೆ ಪರ್ಯಾಯವಾದ ಸರಸ್ವತಿ ಸಮ್ಮಾನ್ ಪ್ರಶಸ್ತಿ ಭೈರಪ್ಪ ಅವರಿಗೆ ಬಂದಿತ್ತು.

 

WhatsApp Group Join Now
Telegram Group Join Now
Share This Article