ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿಯಾದ ಪದ್ಮಶ್ರೀ ವೆಂಕಪ್ಪ ಅಂಬಾಜಿ ಸುಗತೇಕರ್ : ಸಚಿವರ ಎದುರು ಗೊಂದಲಿ ಹಾಡು ಹೇಳಿದ ವೆಂಕಪ್ಪ

Ravi Talawar
ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಭೇಟಿಯಾದ ಪದ್ಮಶ್ರೀ ವೆಂಕಪ್ಪ ಅಂಬಾಜಿ ಸುಗತೇಕರ್ : ಸಚಿವರ ಎದುರು ಗೊಂದಲಿ ಹಾಡು ಹೇಳಿದ ವೆಂಕಪ್ಪ
WhatsApp Group Join Now
Telegram Group Join Now
ಬೆಳಗಾವಿ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು  ಪದ್ಮಶ್ರೀ ಪುರಸ್ಕೃತ ವೆಂಕಪ್ಪ ಅಂಬಾಜಿ ಸುಗತೇಕರ್ ಅವರು ಭೇಟಿಯಾದರು.
ಕುವೆಂಪು ನಗರದಲ್ಲಿರುವ ಸಚಿವರ ನಿವಾಸಕ್ಕೆ ಆಗಮಿಸಿದ ಬಾಗಲಕೋಟೆ ಜಿಲ್ಲೆಯ ನವನಗರದ ವೆಂಕಪ್ಪ ಅಂಬಾಜಿ ಸುಗತೇಕರ್ ಅವರನ್ನುಸಚಿವರು ಗೌರವಿಸಿದರು.  ಕಲಾ ಕ್ಷೇತ್ರಕ್ಕೆ ಅವರು ನೀಡಿದ ಅನನ್ಯ ಕೊಡುಗೆಯನ್ನು ಸ್ಮರಿಸಿದರು‌.
ಸಾವಿರಕ್ಕೂ ಹೆಚ್ಚು ಗೊಂದಲಿ ಹಾಡುಗಳನ್ನು ಹಾಡಿ ಜನಮನ ಗೆದ್ದಿರುವ ವೆಂಕಪ್ಪ ಅವರ ಸಾಧನೆ ನಿಜಕ್ಕೂ ಪ್ರಶಂಸನೀಯ. ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿ, ಅನೇಕ ಪುರಸ್ಕಾರಗಳನ್ನು ಪಡೆದುಕೊಂಡಿರುವ ಅವರು ಕಲೆಗಳ ಲೋಕದಲ್ಲಿ ಮೇರು ಸಾಧಕರಾಗಿ ಹೊರಹೊಮ್ಮಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶ್ಲಾಘಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಶಂಕರಗೌಡ ಪಾಟೀಲ್ ಮುಂತಾದವರು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article