ಇಸ್ಲಾಮಾಬಾದ್: ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಪಕ್ಷವನ್ನು ಪಾಕಿಸ್ತಾನ ಸರ್ಕಾರ ನಿಷೇಧಿಸಲಿದೆ ಎಂದು ಸೋಮವಾರ ಪ್ರಕಟಿಸಲಾಗಿದೆ.
ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ ಆರೋಪದ ಮೇಲೆ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಅನ್ನು ನಿಷೇಧಿಸಲು ಫೆಡರಲ್ ಸರ್ಕಾರ ನಿರ್ಧರಿಸಿದೆ ಎಂದು ಮಾಹಿತಿ ಸಚಿವ ಅತ್ತಾವುಲ್ಲಾ ತರಾರ್ ಹೇಳಿರುವುದಾಗಿ ದಿ ನ್ಯೂಸ್ ಇಂಟರ್‌ನ್ಯಾಶನಲ್ ವರದಿ ಮಾಡಿದೆ.
ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್(ಪಿಟಿಐ) ಮೇಲೆ ನಿರ್ಬಂಧಗಳನ್ನು ಹೇರಲು ಸ್ಪಷ್ಟ ಪುರಾವೆಗಳು ಲಭ್ಯವಿದ್ದು, ಸರ್ಕಾರವು ಪಕ್ಷದ ವಿರುದ್ಧ ಕ್ರಮಕೈಗೊಳ್ಳಲಿದೆ ಎಂದು ತರಾರ್ ಹೇಳಿದ್ದಾರೆ. 71 ವರ್ಷದ ಇಬ್ರಾನ್ ಖಾನ್ ಅವರು ಪ್ರಸ್ತುತ ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿದ್ದಾರೆ.