ಪೂಂಚ್, ಏಪ್ರಿಲ್ 2: ಪಾಕಿಸ್ತಾನ ಸೇನೆಯು ಗಡಿ ನಿಯಂತ್ರಣ ರೇಖೆ ದಾಟಿ ಭಾರತದ ಮೇಲೆ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಭಾರತ ಕೂಡ ದಾಳಿ ನಡೆಸಿದೆ. ಪಾಕಿಸ್ತಾನದ ಈ ಕದನ ವಿರಾಮ ಉಲ್ಲಂಘನೆಯನ್ನು ಭಾರತೀಯ ಸೇನೆ ಅಧಿಕೃತವಾಗಿ ದೃಢಪಡಿಸಿದೆ. ಈ ವರ್ಷದ ಫೆಬ್ರವರಿಯಲ್ಲಿ, ಕೃಷ್ಣ ಘಾಟಿ ವಲಯದಲ್ಲಿ ಇದೇ ರೀತಿಯ ಗುಂಡಿನ ಚಕಮಕಿ ಘಟನೆಗಳು ವರದಿಯಾಗಿದ್ದವು. ಪೂಂಚ್ ಜಿಲ್ಲೆಯ ಕೃಷ್ಣ ಘಾಟಿ ಪ್ರದೇಶದಲ್ಲಿ ಪಾಕಿಸ್ತಾನ ಸೇನೆಯ ಒಳನುಸುಳುವಿಕೆ ಪ್ರಯತ್ನವನ್ನು ಭಾರತೀಯ ಸೇನೆ ಯಶಸ್ವಿಯಾಗಿ ವಿಫಲಗೊಳಿಸಿದೆ.
ದಿನವಿಡೀ ನಿರಂತರ ಗುಂಡಿನ ಚಕಮಕಿ ಮುಂದುವರೆದಿದ್ದು, ಕೃಷ್ಣ ಘಾಟಿ ಪ್ರದೇಶದಲ್ಲಿ ಭಾರತೀಯ ಸೇನೆಯನ್ನು ಸಂಪೂರ್ಣವಾಗಿ ನಿಯೋಜಿಸಲಾಗಿದೆ. ಕಳೆದ ಎರಡು ತಿಂಗಳುಗಳಲ್ಲಿ ನಿಯಂತ್ರಣ ರೇಖೆಯ (ಎಲ್‌ಒಸಿ) ದಕ್ಷಿಣ ಪಿರ್ ಪಂಜಾಲ್ ವಲಯದಲ್ಲಿ ಗಡಿಯಾಚೆಗಿನ ಗುಂಡಿನ ದಾಳಿ ಘಟನೆಗಳಲ್ಲಿ ತೀವ್ರ ಏರಿಕೆ ಕಂಡುಬಂದಿದೆ.