ಕಾರವಾರ: ಸರಕು ಸಾಗಣೆ ಹಡಗಿನಲ್ಲಿ ಕಾರವಾರ ಬಂದರಿಗೆ ಆಗಮಿಸಿದ ಪಾಕಿಸ್ತಾನಿ ಪ್ರಜೆಗೆ ಅಧಿಕಾರಿಗಳು ಪ್ರವೇಶ ನಿರಾಕರಿಸಿದ್ದು, ವಾಪಾಸ್ ಕಳುಹಿಸಿದ್ದಾರೆ. ಇರಾಕ್ ನಿಂದ ಬಿಟುಮೆನ್ ಸಾಗಿಸುತ್ತಿದ್ದ MTR ಓಶಿಯನ್ ಹಡಗಿನಲ್ಲಿ 14 ಭಾರತೀಯ ಸಿಬ್ಬಂದಿ, ಇಬ್ಬರು ಸಿರಿಯನ್ನರು ಮತ್ತು ಒಬ್ಬ ಪಾಕಿಸ್ತಾನಿ ಪ್ರಜೆಯಲ್ಲಿದ್ದರು.
ಮೇ 12 ರಂದು ಬಂದರಿಗೆ ಆಗಮಿಸಿದ ಈ ಹಡಗಿನಲ್ಲಿ ಆಗಮಿಸಿದ ಪಾಕ್ ಪ್ರಜೆಗಳನ್ನು ವಾಪಸ್ ಕಳುಹಿಸಲಾಯಿತು ಎಂದು ಭಾರತೀಯ ಕೋಸ್ಟ್ ಗಾರ್ಡ್ ತಿಳಿಸಿದೆ. ಪಾಕಿಸ್ತಾನ ಮತ್ತು ಭಾರತ ನಡುವಿನ ಸಂಬಂಧ ಹದಗೆಟ್ಟಿರುವ ಕಾರಣ ಪಾಕಿಸ್ತಾನಿ ಮತ್ತು ಸಿರಿಯಾ ಪ್ರಜೆಗಳು ಹಡಗಿನಿಂದ ಇಳಿಯದಂತೆ ಪೊಲೀಸ್ ಇನ್ಸ್‌ಪೆಕ್ಟರ್ ನಿಶ್ಚಲ್ ಕುಮಾರ್ ಸೂಚನೆ ನೀಡಿದ್ದರು. ಅದರಂತೆ ಪೊಲೀಸರು ಅವರ ಮೊಬೈಲ್ ಫೋನ್ ಗಳನ್ನು ವಶಕ್ಕ ಪಡೆದರು.
ಬಳಿಕ ಇರಾಕ್ ಹಡಗು ಬಂದರಿನಲ್ಲಿ ಬಿಟುಮೆನ್ ಇಳಿಸಿದ ನಂತರ ಇರಾಕ್‌ಗೆ ಹೊರಟಿತು ಎಂದು ಕಾರವಾರ ಬಂದರು ಅಧಿಕಾರಿಗಳು ತಿಳಿಸಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಭಾರತವು ಪಾಕಿಸ್ತಾನಿ ಪ್ರಜೆಗಳು ದೇಶ ಪ್ರವೇಶಿಸುವುದನ್ನು ನಿಷೇಧಿಸಿದೆ ಮತ್ತು ಅವರ ವೀಸಾವನ್ನು ಸಹ ರದ್ದುಗೊಳಿಸಿದೆ. ಪಹಲ್ಗಾಮ್ ದಾಳಿಯಲ್ಲಿ 26 ಮಂದಿ ಸಾವನ್ನಪ್ಪಿದ್ದರು.