ಪಂಚಮಸಾಲಿ ಮೀಸಲಾತಿ ಹೋರಾಟ: ಕಲ್ಲು ತೂರಾಟ; 17 ಜನರಿಗೆ ಗಾಯ: ಐವರ ವಿರುದ್ಧ ಎಫ್​​ಐಆರ್

Ravi Talawar
ಪಂಚಮಸಾಲಿ ಮೀಸಲಾತಿ ಹೋರಾಟ: ಕಲ್ಲು ತೂರಾಟ; 17 ಜನರಿಗೆ ಗಾಯ: ಐವರ ವಿರುದ್ಧ ಎಫ್​​ಐಆರ್
WhatsApp Group Join Now
Telegram Group Join Now

ಬೆಳಗಾವಿ, ಡಿಸೆಂಬರ್​ 11: 2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಮಸಾಲಿ ಸಮುದಾಯದವರು ಬೆಳಗಾವಿಯಲ್ಲಿ  ಬುಧವಾರ ನಡೆಸಿದ ಹೋರಾಟ ನಗರವನ್ನು ರಣರಂಗವಾಗಿಸಿತ್ತು. ಪಂಚಮಸಾಲಿ ಸಮುದಾಯದ ಹೋರಾಟದ ವೇಳೆ ನಡೆದ ಕಲ್ಲು ತೂರಾಟದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ 17 ಜನರಿಗೆ ಗಾಯವಾಗಿತ್ತು. ಹಾಗೇ ಏಳು ಸರ್ಕಾರಿ ಬಸ್, ಮೂರು ಪೊಲೀಸ್ ವಾಹನ ಜಖಂಗೊಂಡ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಲ್ಲು ಎಸೆದ ನಿಂಗಪ್ಪ ಬಣದ್, ರಾಮಗೌಡ ಫಕೀರಗೌಡ, ಉಮೇಶ್ ಇಂಗಳೆವಾರ್, ಮಂಜುನಾಥ್ ಬೆಂಡಿಗೇರಿ, ಮಂಜುನಾಥ್ ಗುಮ್ಮಗೋಳ ಹಾಗೂ ಇತರರ ಮೇಲೆ ಎಫ್​ಐಆರ್​ ದಾಖಲಾಗಿದೆ. ಆರೋಪಿತರು ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ಮಾಡಿ ಗಂಭೀರ ಗಾಯಗೊಳಿಸಿದ್ದಾರೆ. ಅಲ್ಲದೇ ಕೊಲೆ ಮಾಡಲು ಯತ್ನಸಿದ್ದಾರೆ. ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಮಾಡಿದ್ದಾರೆ ಎಂದು ಬಿಎನ್‌ಎಸ್ ಕಲಂ 115(2), 109(1), 118(2), 117(2), 352, 351(2), 132, 121, 223, 324,189, 189(3), 191(2), 190 ಅಡಿ ಕೇಸ್ ಪಿಐ ಆರ್.ಆರ್ ಪಾಟೀಲ್ ಅವರು ಕೇಸ್ ದಾಖಲಿಸಿಕೊಂಡಿದ್ದಾರೆ.

2ಎ ಮೀಸಲಾತಿ ಆಗ್ರಹಿಸಿ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಸುಮಾರು ವರ್ಷಗಳಿಂದ ಪ್ರತಿಭಟನೆ ನಡೆಯುತ್ತಿದೆ. ಸೋಮವಾರದಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಮೀಸಲಾತಿ ಆಗ್ರಹಿಸಿ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಹೋರಾಟಗಾರರು ಸೌಧದ ಎದುರು ಪ್ರತಿಭಟನೆ ನಡೆಸಿದರು.

WhatsApp Group Join Now
Telegram Group Join Now
Share This Article