ಬೆಂಗಳೂರು: ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದ್ದು, ಡಿಸಿಎಂ ಡಿಕೆ ಶಿವಕುಮಾರ್, ಕೂಡಲ ಸಂಗಮ ಪೀಠಾಧ್ಯಕ್ಷ ಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಮುಖಂಡರು ಭಾಗಿಯಾಗಲಿದ್ದಾರೆ. ಇದಕ್ಕೂ ಮುನ್ನ ಜಯಮೃತ್ಯುಂಜಯ ಸ್ವಾಮೀಜಿ, ಶಿವಾನಂದ್ ಸರ್ಕಲ್ನಿಂದ ಗೃಹ ಕಚೇರಿ ಕೃಷ್ಣಾವರೆಗೂ ಕಾಲ್ನಡಿಗೆ ಮಾಡುವ ಸಾಧ್ಯತೆ ಇದೆ.
ಜಾತಿ ಗಣತಿ ಕುರಿತು ಸರ್ಕಾರದೊಳಗೆ ಅಪಸ್ವರ ಕೇಳಿ ಬಂದಿತ್ತು. ಆದರೆ, ಇನ್ನೊಂದು ಬಣ ಜಾತಿ ಗಣತಿ ಜಾರಿ ಮಾಡುವಂತೆ ಪಟ್ಟು ಹಿಡಿದಿದೆ. ಇದರ ನಡುವೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಕರೆದಿರುವ ಸಭೆ ಮಹತ್ವದ ಪಡೆದಿದೆ.