ಚಂಡೀಗಢ,ಏ.12: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಹೆರಿಗೆ ಮತ್ತು ಋತುಚಕ್ರ ಅವಧಿಯ ರಜೆಯನ್ನು ಕೇರಳ ಸರ್ಕಾರ ಕಳೆದ ವರ್ಷ ಘೋಷಿಸಿತ್ತು. ಇದೀಗಾ ಚಂಡೀಗಢದ ಪಂಜಾಬ್ ವಿಶ್ವವಿದ್ಯಾನಿಲಯವು ವಿದ್ಯಾರ್ಥಿನಿಯರಿಗೆ ಋತುಚಕ್ರದ ಸಮಯದಲ್ಲಿ ಒಂದು ದಿನದ ರಜೆ ನೀಡಲು ಹೊಸ ನೀತಿಯನ್ನು ಜಾರಿಗೆ ತಂದಿದೆ.
ಈ ನೀತಿಯನ್ನು 2024-25ರ ಶೈಕ್ಷಣಿಕ ಅಧಿವೇಶನದ ಮುಂಬರುವ ಸೆಮಿಸ್ಟರ್ಗಳಿಂದ ಜಾರಿಗೊಳಿಸಲಾಗುವುದು ಎಂದು ಪಂಜಾಬ್ ವಿಶ್ವವಿದ್ಯಾಲಯದ ಉಪಕುಲಪತಿಗಳು ಮಾಹಿತಿ ನೀಡಿದ್ದಾರೆ.