ಸಂಸತ್ತಿನ ಮುಂಗಾರು ಅಧಿವೇಶನ: ಕಲಾಪ ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಿಕೆ

Ravi Talawar
ಸಂಸತ್ತಿನ ಮುಂಗಾರು ಅಧಿವೇಶನ: ಕಲಾಪ ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಿಕೆ
WhatsApp Group Join Now
Telegram Group Join Now

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದ ಮೂರನೇ ದಿನವಾದ ಇಂದು ಬುಧವಾರ ಕೂಡ ವಿರೋಧ ಪಕ್ಷಗಳ ಪ್ರತಿಭಟನೆಯ ನಡುವೆ ಉಭಯ ಸದನಗಳ ಕಲಾಪ ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಿಕೆಯಾಗಿದೆ.

ಬಿಹಾರದಲ್ಲಿ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ ಮತ್ತು ಆಪರೇಷನ್ ಸಿಂದೂರ್ ಸೇರಿದಂತೆ ಇತರ ವಿಷಯಗಳ ಕುರಿತು ಚರ್ಚಿಸಲು ಒತ್ತಾಯಿಸಿ ವಿರೋಧ ಪಕ್ಷದ ಸಂಸದರು ಘೋಷಣೆಗಳನ್ನು ಕೂಗುವುದರೊಂದಿಗೆ ಲೋಕಸಭೆಯ ಅಧಿವೇಶನ ಪ್ರಾರಂಭವಾಯಿತು. ಪ್ರತಿಭಟನೆಗಳು ಸಭ್ಯತೆಯನ್ನು ಕಾಪಾಡಿಕೊಳ್ಳುವಂತೆ ಸ್ಪೀಕರ್ ಓಂ ಬಿರ್ಲಾ ಒತ್ತಾಯಿಸಿದರು. ಆದರೆ ಗದ್ದಲ ಮುಂದುವರಿದಂತೆ ಕಲಾಪವನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಿದರು.

ಬಿಹಾರದಲ್ಲಿ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ ಕುರಿತು ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷದ ಸದಸ್ಯರು ಕಲಾಪಕ್ಕೆ ಅಡ್ಡಿಪಡಿಸಿದ ನಂತರ ರಾಜ್ಯಸಭೆ ಕಲಾಪವನ್ನು ಆರಂಭದಲ್ಲಿ ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಲಾಯಿತು. ಮತ್ತೆ ಸದನ ಸೇರಿದಾಗ ಗದ್ದಲ, ಕೋಲಾಹಲ ಮುಂದುವರಿದು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು.

 

WhatsApp Group Join Now
Telegram Group Join Now
Share This Article