ಬೆಂಗಳೂರು, ಜುಲೈ.25: . ನೀಟ್ ಪರೀಕ್ಷೆ ರದ್ದುಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಸಿಇಟಿ ಅಂಕಗಳನ್ನು ಆಧರಿಸಿ ಪ್ರವೇಶಾತಿ ನೀಡಬೇಕೆಂದು ಒತ್ತಾಯಿಸಲಾಗಿದೆ.
ವಿಧಾನಪರಿಷತ್ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು NEET ರದ್ದತಿಗೆ ಕೋರಿ ನಿರ್ಣಯ ಮಂಡಿಸಿದರು. ಸಿಇಟಿ ಅಂಕಗಳನ್ನು ಆಧರಿಸಿ ಪ್ರವೇಶಾತಿ ನೀಡಬೇಕು. ನೀಟ್ ಪರೀಕ್ಷೆ ರದ್ದುಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ನಿರ್ಣಯ ಅಂಗೀಕಾರ ಮಾಡಲಾಯಿತು.
ಇನ್ನು ಒನ್ ನೇಷನ್, ಒನ್ ಎಲೆಕ್ಷನ್ ವಿರೋಧಿಸಿ ವಿಧಾನಪರಿಷತ್ನಲ್ಲಿ ಸಿಎಂ ಸಿದ್ದರಾಮಯ್ಯ ನಿರ್ಣಯ ಮಂಡಿಸಿದರು. ಬಿಜೆಪಿ, JDS ಸದಸ್ಯ ಬಲ ಹೆಚ್ಚಿದ್ದರೂ ಗದ್ದಲದಿಂದ ನಿರ್ಣಯ ಪಾಸ್ ಮಾಡಲಾಗಿದೆ. ಒಂದು ರಾಷ್ಟ್ರ ಒಂದು ಚುನಾವಣೆ ನೀತಿಯನ್ನು ಅನುಷ್ಠಾನಗೊಳಿಸಬಾರದು. ಈ ಬಗ್ಗೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ನಿರ್ಣಯ ಅಂಗೀಕಾರ.
ವಿಧಾನಸಭೆಯಲ್ಲಿ ಅರಣ್ಯ ವಾಸಿ ಅನುಸೂಚಿತ ಬುಡಕಟ್ಟುಗಳಿಗೆ ಸಮಾನವಾಗಿ ಇತರ ಪಾರಂಪರಿಕ ಅರಣ್ಯ ವಾಸಿಗಳನ್ನು ಪರಿಗಣಿಸುವ ಹಾಗೆ, ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯವಾಸಿಗಳ(ಅರಣ್ಯ ಹಕ್ಕುಗಳ ಮಾನ್ಯತೆ) ಅಧಿನಿಯಮ 2006(2007ರ ಕೇಂದ್ರ ಅಧಿನಿಯಮ 02) ಮತ್ತು ಅದರ ಅಡಿಯಲ್ಲಿ ಮಾಡಲಾದ ನಿಯಮಗಳನ್ನು ಸೂಕ್ತ ಮತ್ತು ಸಮರ್ಪಕವಾಗಿ ಮಾರ್ಪಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ನಿರ್ಣಯ ಅಂಗೀಕಾರ ಮಾಡಲಾಯಿತು.