ಮುಂಬೈ: ಮರಾಠ ಮೀಸಲಾತಿಗೆ ಒತ್ತಾಯಿಸಿ ಮುಂಬೈನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಮನೋಜ್ ಜರಾಂಗೆ ಪಾಟೀಲ್ ಬೇಡಿಕೆಗೆ ಸರ್ಕಾರ ಒಪ್ಪಿಕೊಂಡ ಹಿನ್ನೆಲೆ ಅವರು ಉಪವಾಸ ಸತ್ಯಾಗ್ರಹವನ್ನು ಕೈಬಿಟ್ಟಿದ್ದು, ಚಿಕಿತ್ಸೆಗಾಗಿ ಛತ್ರಪತಿ ಸಂಭಾಜಿನಗರದ ಗ್ಯಾಲಕ್ಸಿ ಆಸ್ಪತ್ರೆಗೆ ಅವರನ್ನು ದಾಖಲಾಗಿದ್ದಾರೆ.
ಮಂಗಳವಾರ ತಡರಾತ್ರಿ ಅವರನ್ನು ಆಸ್ಪತ್ರೆಗೆ ದಾಖಲಾದ ನಂತರ ವೈದ್ಯರು ಅವರನ್ನು ಪರೀಕ್ಷೆ ನಡೆಸಿದ್ದು, ದೀರ್ಘಕಾಲದ ಉಪವಾಸ ಅವರ ಆರೋಗ್ಯದ ಮೇಲೆ ಪರಿಣಾಮ ಬೀರಿದೆ. ಮುಂದಿನ ಕೆಲವು ದಿನಗಳವರೆಗೆ ಅವರಿಗೆ ವೈದ್ಯಕೀಯ ಮೇಲ್ವಿಚಾರಣೆ ಅಗತ್ಯವಾಗಿದೆ ಎಂದು ಡಾ. ವಿನೋದ್ ಚವಾರೆ ತಿಳಿಸಿದ್ದಾರೆ
ಪ್ರಸ್ತುತ ಚಿಕಿತ್ಸೆ ಪ್ರಗತಿಯಲ್ಲಿದ್ದು, ವೈದ್ಯರು ಅವರಿಗೆ ಕನಿಷ್ಠ ಎರಡು ವಾರಗಳ ಕಾಲ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಅವರನ್ನು ಎಲ್ಲಾ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ರಾಜ್ಯ ಸರ್ಕಾರ ಮಜೋಜ್ ಜರಾಂಗೆ ಪಾಟೀಲ್ ಅವರ ಬೇಡಿಕೆಗಳನ್ನು ಒಪ್ಪಿಕೊಂಡಿದ್ದರಿಂದ ಸಂತಸಗೊಂಡಿದ್ದು,. ನಗರದಲ್ಲಿ ಸಂಭ್ರಮವಿದೆ. ಸರ್ಕಾರದ ಈ ನಿರ್ಧಾರವನ್ನು ರಾಜ್ಯಾದ್ಯಂತ ಸ್ವಾಗತಿಸಲಾಗುತ್ತಿದೆ. ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲೂ ಮರಾಠಾ ಸಮುದಾಯದ ವಿವಿಧ ವರ್ಗಗಳು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಲಾಗಿದೆ. ಹಲವೆಡೆ ಸಿಹಿತಿಂಡಿಗಳನ್ನು ವಿತರಿಸುವ ಮೂಲಕ ಸಂತೋಷ ವ್ಯಕ್ತಪಡಿಸಲಾಗಿದೆ.