ಬೆಂಗಳೂರು, ಆಗಸ್ಟ್ 14: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪವಿತ್ರಾ ಗೌಡ ಜಾಮೀನನ್ನು ಸುಪ್ರೀಂಕೋರ್ಟ್ ಇಂದು ರದ್ದು ಪಡಿಸಿದೆ. ಪವಿತ್ರಾ ಗೌಡ ಮನೆಗೆ ತೆರಳಿರುವ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ. ಸುಪ್ರೀಂಕೋರ್ಟ್ ದರ್ಶನ್, ಪವಿತ್ರಾಗೌಡ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದು ಪಡಿಸಿತ್ತು.ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖಾಧಿಕಾರಿ ಸಮ್ಮುಖದಲ್ಲಿ ವಶಕ್ಕೆ ಪಡೆಯಲಿದ್ದಾರೆ. ಗೆಲವು ನಿಧಾನ ಆಗಬಹುದು ದೇವರ ರಕ್ಷಣೆ ಇದ್ದೇ ಇರುತ್ತೆ ಎಂದು ಪವಿತ್ರಾ ಗೌಡ ಪೋಸ್ಟ್ ಮಾಡಿದ್ದರು. ನಾನು ತಾಳ್ಮೆ ಹಾಗೂ ನಂಬಿಕೆಯನ್ನು ಆಯ್ಕೆ ಮಾಡಿಕೊಳ್ತಿನಿ ಎಂದು ಪವಿತ್ರಾ ಹೇಳಿದ್ದಾರೆ.
ಹೈಕೋರ್ಟ್ ಆದೇಶ ವಿಕೃತತೆಯಿಂದ ಕೂಡಿದೆ, ಹೈಕೋರ್ಟ್ ಆದೇಶ ಅಧಿಕಾರದ ಯಾಂತ್ರಿಕ ಪ್ರಯೋಗವನ್ನ ಪ್ರತಿಬಿಂಬಿಸುತ್ತದೆ.ಜಾಮೀನು ಮಂಜೂರು ಮಾಡುವುದರಿಂದ ವಿಚಾರಣೆಯ ಮೇಲೆ ಪರಿಣಾಮ ಬೀರಲಿದೆ.ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.