ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ರಾಜ್ಯ ಸಮಿತಿಯ ನಿಯೋಗವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಾನ್ಯ ಮಂತ್ರಿಗಳಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ರವರನ್ನು ರಾಜ್ಯ ಕಾರ್ಯದರ್ಶಿ ಶ್ರೀಮತಿ ಶೋಭಾ ಎಸ್. ಅವರ ನೇತೃತ್ವದಲ್ಲಿ ಭೇಟಿಮಾಡಲಾಯಿತು.
ಸಾಮಾಜಿಕ ಜಾಲತಾಣ ಮಾಧ್ಯಮಗಳ ಪರಿಣಾಮ, ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ಹಾಗೂ ಇನ್ನೂ ಕೆಲವು ವಿಷಯಗಳನ್ನು ಪ್ರಸ್ತಾಪಿಸಲಾಯಿತು.
ಮಹಿಳೆ ಮತ್ತು ಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟಲು ಹಾಗೂ ಇತ್ತೀಚಿನ ಟಾಕ್ಸಿಕ್, ಕೆ ಡಿ ದಿ ಡೆವಿಲ್ ಹಾಗೂ ಇನ್ನಿತರ ಚಿತ್ರಗಳಲ್ಲಿ ಮಹಿಳೆಯರನ್ನು ಅಸಭ್ಯವಾಗಿ ತೋರಿಸುವ ಹಾಗೂ ಕ್ರೌರ್ಯವನ್ನು ವೈಭವೀಕರಿಸುವುದನ್ನು ವಿರೋಧಿಸಿ ಹಾಗೂ ಇನ್ನಿತರ ಬೇಡಿಕೆಗಳ ಮನವಿ ಪತ್ರವನ್ನು ಕೊಡಲಾಯಿತು.
ಎಲ್ಲಾ ಬೇಡಿಕೆಗಳ ಕುರಿತು ಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ಸಾಮಾಜಿಕ ಮಾಧ್ಯಮಗಳ ಪ್ರಭಾವದ ಕುರಿತು ಒಂದು ವಿಸ್ತೃತ ಸಭೆಯನ್ನು ಕರೆಯಲಾಗುವುದೆಂದು ಆಶ್ವಾಸನೆ ನೀಡಿದರು.


