ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕುಸಿದಿದ್ದರೂ, ಇಂದು ದೇಶದ ಹಲವು ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ಬೆಲೆ ಏರಿಕೆಯಾಗಿದೆ. ಉತ್ತರ ಪ್ರದೇಶದ ನಗರಗಳಿಂದ ಹಿಡಿದು ರಾಜಸ್ಥಾನದವರೆಗೆ ಇಂದು ತೈಲ ಬೆಲೆಯಲ್ಲಿ ಬದಲಾವಣೆಯಾಗಿದೆ. ಸರ್ಕಾರಿ ತೈಲ ಕಂಪನಿಗಳು ಗುರುವಾರ ಬೆಳಗ್ಗೆ ಪೆಟ್ರೋಲ್ ಮತ್ತು ಡೀಸೆಲ್‌ನ ಹೊಸ ದರಗಳನ್ನು ಬಿಡುಗಡೆ ಮಾಡಿದ್ದು, ದೆಹಲಿ-ಮುಂಬೈನಂತಹ ದೇಶದ 4 ಮಹಾನಗರಗಳಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ.
ಸರ್ಕಾರಿ ತೈಲ ಕಂಪನಿಗಳ ಪ್ರಕಾರ, ಉತ್ತರ ಪ್ರದೇಶದ ಗೌತಮ್ ಬುದ್ಧ ನಗರದಲ್ಲಿ (ನೋಯ್ಡಾ ಮತ್ತು ಗ್ರೇಟರ್ ನೋಯ್ಡಾ) ಪೆಟ್ರೋಲ್ 18 ಪೈಸೆಗಳಷ್ಟು ದುಬಾರಿಯಾಗಿದೆ ಮತ್ತು ಪ್ರತಿ ಲೀಟರ್‌ಗೆ 95.01 ರೂ.ಗೆ ಮಾರಾಟವಾಗುತ್ತಿದೆ. ಡೀಸೆಲ್ ಕೂಡ 18 ಪೈಸೆ ಏರಿಕೆಯಾಗಿದ್ದು, ಲೀಟರ್ ಗೆ 88.14 ರೂ.ಗೆ ತಲುಪಿದೆ. ಗಾಜಿಯಾಬಾದ್ ಜಿಲ್ಲೆಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ 6 ಪೈಸೆ ಇಳಿಕೆಯಾಗಿ 94.65 ರೂ. ಆಗಿದೆ. ಡೀಸೆಲ್ ಲೀಟರ್ ಗೆ 7 ಪೈಸೆ ಇಳಿಕೆಯಾಗಿ 87.75 ರೂ.ಗೆ ತಲುಪಿದೆ. ರಾಜಸ್ಥಾನದ ಸಿಕರ್ ಜಿಲ್ಲೆಯಲ್ಲಿ ಪೆಟ್ರೋಲ್ ಬೆಲೆ 82 ಪೈಸೆಯಷ್ಟು ಹೆಚ್ಚಾಗಿದೆ ಮತ್ತು ಲೀಟರ್‌ಗೆ 106.17 ರೂ.ಗೆ ಮಾರಾಟವಾಗುತ್ತಿದೆ. ಡೀಸೆಲ್ ಲೀಟರ್‌ಗೆ 74 ಪೈಸೆ ಏರಿಕೆಯಾಗಿ 91.52 ರೂ.ಗೆ ಮಾರಾಟವಾಗುತ್ತಿದೆ.