ಎಸ್ಎಸ್ಎಲ್​ಸಿ ಮುಖ್ಯ ಪರೀಕ್ಷೆಗೆ ಮತ್ತಷ್ಟು ಕಠಿಣ ರೂಲ್ಸ್ ಜಾರಿಗೆ ಪ್ಲಾನ್

Ravi Talawar
ಎಸ್ಎಸ್ಎಲ್​ಸಿ ಮುಖ್ಯ ಪರೀಕ್ಷೆಗೆ ಮತ್ತಷ್ಟು ಕಠಿಣ ರೂಲ್ಸ್ ಜಾರಿಗೆ ಪ್ಲಾನ್
WhatsApp Group Join Now
Telegram Group Join Now

ಬೆಂಗಳೂರು, ಅಕ್ಟೋಬರ್ 22: ಕಳೆದ ಸಾಲಿನ ಎಸ್​ಎಸ್​ಎಲ್​ಸಿ ಫಲಿತಾಂಶ ಕುಸಿದ ಬೆನ್ನಲ್ಲೇ ಶಿಕ್ಷಣ ಇಲಾಖೆ ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ವೆಬ್ ಕಾಸ್ಟಿಂಗ್ ಹಾಗೂ ಇತರ ಕಠಿಣ ನಿಯಮದ ಪರಿಣಾಮ ಫಲಿತಾಂಶ ಕುಸಿತ ಆಯಿತು ಎಂಬ ಟೀಕೆ ವ್ಯಕ್ತವಾಗಿತ್ತು. ಅದಾದ ಬೆನ್ನಲ್ಲೇ ಪ್ರಸಕ್ತ ಸಾಲಿನ ರಾಜ್ಯ ಪಠ್ಯಕ್ರಮ ಅನುಸರಿಸುವ ವಿದ್ಯಾರ್ಥಿಗಳ ಎಸ್​ಎಸ್​ಎಲ್​ಸಿ ಫಲಿತಾಂಶ ಹೆಚ್ಚು ಮಾಡಲು ಶಿಕ್ಷಣ ಇಲಾಖೆ ನಾನಾ ಸರ್ಕಸ್ ಮಾಡುತ್ತಿದೆ. ಅದರ ಭಾಗವಾಗಿ ವಾರ್ಷಿಕ ಪರೀಕ್ಷೆ ತಯಾರಿ ಅಂತ ಇದೇ ಮೊಟ್ಟ ಮೊದಲ ಬಾರಿಗೆ ಕೆಎಸ್​​ಇಎಬಿ ಮಧ್ಯವಾರ್ಷಿಕ ಪರೀಕ್ಷೆ ನಡೆಸಲು ಪ್ರಶ್ನೆ ಪತ್ರಿಕೆ ತಯಾರಿ ಮಾಡಿತ್ತು. ಆದರೆ ಇದು ಲೀಕ್ ಆಗಿದ್ದು, ಹೊಡೆತ ನೀಡಿದೆ. ಇದೀಗ ಶಿಕ್ಷಣ ಇಲಾಖೆ ಎಚ್ಚೆತ್ತುಗೊಂಡಿದ್ದು, ಎಸ್ಎಸ್ಎಲ್​ಸಿ ಮುಖ್ಯ ಪರೀಕ್ಷೆಗೆ ಮತ್ತಷ್ಟು ಕಠಿಣ ರೂಲ್ಸ್ ಜಾರಿಗೆ ಪ್ಲಾನ್ ಮಾಡಿದೆ.

ಎಸ್‌ಎಸ್‌ಎಲ್‌ಸಿ ಅರ್ಧವಾರ್ಷಿಕ ಪರೀಕ್ಷೆಗೆ ಈ ವರ್ಷ ಏಕರೂಪದ ಪ್ರಶ್ನೆ ಪತ್ರಿಕೆಯನ್ನು ಶಿಕ್ಷಣ ಇಲಾಖೆ ಹೊರತಂದಿತ್ತು. ಆದರೆ, ಈ ಮಧ್ಯವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಆನ್ಲೈನ್ ಅಲ್ಲಿ ಸೋರಿಕೆಯಾಗಿದೆ. ಶಿಕ್ಷಣ ಇಲಾಖೆಯ ಈ ಎಡವಟ್ಟು ಕಷ್ಟ ಪಟ್ಟು ಓದುವ ವಿದ್ಯಾರ್ಥಿಗಳಿಗೆ ಅನ್ಯಾಯವಾಗುವಂತೆ ಮಾಡಿದೆ. ಶಿಕ್ಷಣ ಇಲಾಖೆ ವಿರುದ್ಧ ಪೋಷಕರು ಸಖತ್ ಗರಂ ಆಗಿದ್ದಾರೆ.

ಈ ಬೆಳವಣಿಗೆ ಬೆನ್ನಲ್ಲೇ ಎಚ್ಚೆತ್ತುಗೊಂಡಿರುವ ಶಿಕ್ಷಣ ಇಲಾಖೆ, ಅಧಿಕಾರಿಗಳ ಹಂತದಲ್ಲಿ ಸಭೆ ನಡೆಸಿದೆ. ಎಡವಟ್ಟಿಗೆ ಕಾರಣ ಏನು ಎಂಬುದನ್ನು ಪತ್ತೆ ಹಚ್ಚಿದೆ. ಮುಂಬರುವ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಗೆ ಪ್ರಶ್ನಪತ್ರಿಕೆ ಲೀಕ್ ತಡೆಯಲು ಮುಂದಾಗಿದೆ. ಪ್ರತಿಯೊಂದು ಕೊಠಡಿಗೂ ಸಿಸಿಟಿವಿ ಕ್ಯಾಮರ ಹಾಗೂ ತಾಲೂಕು ಮಟ್ಟದಲ್ಲಿ ನೋಡಲ್ ಕೇಂದ್ರ ವೆಬ್ ಕಾಸ್ಟಿಂಗ್ ಮತಷ್ಟು ಬಲಪಡಿಸಲು ಮುಂದಾಗಿದೆ.

WhatsApp Group Join Now
Telegram Group Join Now
Share This Article