ಹಾಸನ(ಜೂ.23): ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಅವರ ವಿರುದ್ಧ ಸಲಿಂಗ ಕಾಮದ ಆರೋಪ ಕೇಳಿಬಂದ ಮರುದಿನವೇ ಆ ಸಂಬಂಧ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ. ಇದರ ಬೆನ್ನಲ್ಲೇ ಸೂರಜ್ ರೇವಣ್ಣ ಅವರನ್ನು ತಡರಾತ್ರಿವರೆಗೂ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಸೂರು ಅವರನ್ನು ಬೆರುವಾರ ಪಡೆದಿದ್ದಾರೆ, ವಿಚಾರಣೆ ಬಳಿಕ ಬಂಧಿಸಲಿದ್ದಾರೆ ಎನ್ನಲಾಗುತ್ತಿದ್ದರೂ, ಖಚಿತಪಟ್ಟಿಲ್ಲ.
ಸೂರಜ್ ರೇವಣ್ಣ ಅವರು ತಮ್ಮ ಮೇಲೆ ಆನೈಸರ್ಗಿಕ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಅರಕಲಗೂಡು ಮೂಲದ ಜೆಡಿಎಸ್ ಕಾರ್ಯಕರ್ತರೊಬ್ಬರು ಶನಿವಾರ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದರು. ಈ ದೂರಿನನ್ವಯ ಸೂರಜ್ ವಿರುದ್ಧ ಆನೈಸರ್ಗಿಕ ಲೈಂಗಿಕ ದೌರ್ಜನ್ಯ ದೂರು ದಾಖಲಿಸಲಾಗಿದೆ. ಈ ಮಧ್ಯೆ, ದೂರುದಾರ ತಮ್ಮನ್ನು ಬ್ಲ್ಯಾಕ್ ಮೇಲ್ ಮಾಡಿದ್ದಾನೆ ಎಂದು ಆರೋಪಿಸಿ ದೂರು ನೀಡಲು ಸೂರಜ್ ಹಾಸನದ ‘ಸೆನ್’ (ಸೈಬರ್, ಆರ್ಥಿಕ ಅಪರಾಧ, ನಾರ್ಕೋಟಕ್ಸ್) ಪೊಲೀಸ್ ಠಾಣೆಗೆ ಆರಂಭಿಸಿದ ಅವರನ್ನು ರಾತ್ರಿ 11.30ರವರೆಗೂ ಪೊಲೀಸರು ವಿಚಾರಣೆ ನಡೆಸಿದರು.
ಬಳಿಕ ಅಧಿಕಾರಿಗಳ ಜತೆ ಸೂರಜ್ ನಿಗೂಢ ಸ್ಥಳಕ್ಕೆ ತೆರಳಿದರು. ಅರ್ಧತಾಸಿನಲ್ಲಿ ಮತ್ತೆ ಸಿ.ಎನ್ ತಾಣೆಗೆ ಮರಳಿದರು. ರಾತ್ರಿ 1.30 ಆದರೂ ವಿಚಾರಣೆ ಮುಂದುವರಿದಿತ್ತು. ಪ್ರಕರಣದಲ್ಲಿ ಶನಿಖಾಧಿಕಾರಿಯಾಗಿರುವ ಸಕಲೇಶಪುರ ಡಿವೈಎಸ್ಪಿ ಪ್ರಮೋದ್ ಕುಮಾರ್ ಅವರು ಸೂರಜ್ ಅವರನ್ನು ತೀವ್ರ ವಿಚಾರಣೆಗೆ ಗುರಿಪಡಿಸಿದರು.
ಈ ವೇಳೆ, ದೂರುದಾರ ತಮ್ಮ ಬಳಿ 5 ಕೋಟಿ ರು. ಗೆ ಬೇಡಿಕೆಯಿಟ್ಟು ಕರೆ ಮಾಡಿದ್ದು, ಆ ಆಡಿಯೋ ತಮ್ಮ ಹೇಳಿದ್ದಾರೆನ್ನಲಾಗಿದೆ. ಸೂರಜ್ ರೇವಣ್ಣ ಅವರ ಕಿರಿಯ ಸೋದರ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ. ಆ ಪ್ರಕರಣದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಸೂರಜ್ ತಂದೆ ರೇವಣ್ಣ ಅವರು ಜೈಲಿಗೂ ಹೋಗಿ ಬಂದಿದ್ದಾರೆ. ಇದರ ಬೆನ್ನಲ್ಲೇ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮತ್ತೊಬ್ಬ ಮೊಮ್ಮಗನ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ.