ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗಿದ್ದಾರೆ. ಈ ಪ್ರಕರಣ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ದರ್ಶನ್ ಜೊತೆ ಪವಿತ್ರಾ ಗೌಡ ಸೇರಿ 19 ಮಂದಿ ಬಂಧನಕ್ಕೆ ಒಳಗಾಗಿದ್ದಾರೆ. ಇದು ಹೈಪ್ರೊಫೈಲ್ ಕೇಸ್ ಆಗಿರುವುದರಿಂದ ಸಹಜವಾಗಿಯೇ ಚರ್ಚೆ ಹುಟ್ಟುಹಾಕಿದೆ. ಈ ಪ್ರಕರಣದಲ್ಲಿ ಹೊಸ ಹೊಸ ಹೆಸರುಗಳು ಕೇಳಿ ಬರುತ್ತಿವೆ. ವಿಶೇಷ ಎಂದರೆ ಹಾಸ್ಯನಟ ಚಿಕ್ಕಣ್ಣಗೆ ನೋಟಿಸ್ ನೀಡಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಅಷ್ಟಕ್ಕೂ ಅವರಿಗೆ ನೋಟಿಸ್ ಹೋಗಲು ಕಾರಣ ಏನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.
ಪಾರ್ಟಿಯಲ್ಲಿ ದರ್ಶನ್ ಜೊತೆ ಭಾಗಿಯಾದ ಹಿನ್ನೆಲೆಯಲ್ಲಿ ಚಿಕ್ಕಣ್ಣಗೆ ನೋಟಿಸ್ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಅನ್ನಪೂರ್ಣೇಶ್ವರಿನಗರ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಇಂದು (ಜೂನ್ 17) ಸಂಜೆಯೇ ನೋಟಿಸ್ ನೀಡಲು ಸಿದ್ಧತೆ ನಡೆದಿದೆ ಎಂದು ಹೇಳಲಾಗುತ್ತಿದೆ.