ಧಾರವಾಡ ಭಾರತ ರತ್ನ, ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನಾಚರಣೆ ನಿಮಿತ್ತ ನಗರದ ಆಲೂರು ವೆಂಕಟರಾವ್ (ಜುಬ್ಲಿ) ವೃತ್ತದ ಹತ್ತಿರವಿರುವ ಭಾರತ ರತ್ನ, ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಹಾಗೂ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಸೇರಿದಂತೆ ಗಣ್ಯರಿಂದ ಮಾಲಾರ್ಪಣೆ, ಪುಷ್ಪಾಚರಣೆ ಕಾರ್ಯಕ್ರಮ ಜರುಗಿತು.
ನಂತರ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ, ಪುಷ್ಪಾಚರಣೆ ಮಾಡಿ, ಅವರು ನಮಿಸಿದರು.
ಈ ಸಂದರ್ಭದಲ್ಲಿ ತಹಶಿಲ್ದಾರ ಡಾ. ಡಿ.ಎಚ್.ಹೂಗಾರ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪಿ.ಶುಭ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಮತ್ತು ಸಮಾಜದ ಮುಖಂಡರಾದ ಎಮ್.ಅರವಿಂದ, ಲಕ್ಷ್ಮಣ ಬಕ್ಕಾಯಿ ಸೇರಿದಂತೆ ವಿವಿಧ ಪ್ರಮುಖರು ಹಾಗೂ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


