ಲಖನೌ: ನಾಡು ಹೋಗು ಅಂದ್ರೆ… ಕಾಡು ಬಾ ಎನ್ನುವ ವಯಸ್ಸಲ್ಲಿ ಬಿಜೆಪಿ ಪಕ್ಷದ ಹಿರಿಯ ನಾಯಕನೊಬ್ಬ ತನ್ನ ಅಶ್ಲೀಲ ವರ್ತನೆಯಿಂದ ಇದೀಗ ವ್ಯಾಪಕ ಆಕ್ರೋಶಕ್ಕೆ ತುತ್ತಾಗಿದ್ದಾರೆ.
ಹೌದು.. ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಹಿರಿಯ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಮತ್ತು ರಾಸ್ರಾ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಬಬ್ಬನ್ ಸಿಂಗ್ ರಘುವಂಶಿ ಅವರ ಅಶ್ಲೀಲ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.
ಈ ವಿಡಿಯೋದಲ್ಲಿ, ಬಬ್ಬನ್ ಸಿಂಗ್ ವಿವಾಹ ಸಮಾರಂಭದಲ್ಲಿ ಮಹಿಳಾ ನರ್ತಕಿಯೊಂದಿಗೆ ಅಶ್ಲೀಲವಾಗಿ ವರ್ತಿಸಿದ್ದು, ಈ ವಿಡಿಯೋ ಇದೀಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಮೂಲಗಳ ಪ್ರಕಾರ ವೈರಲ್ ಆಗಿರುವ ವಿಡಿಯೋ ಸುಮಾರು 20-25 ದಿನಗಳ ಹಳೆಯದು ಎಂದು ಹೇಳಲಾಗಿದ್ದು, ಇದು ಬಿಹಾರದ ವಿವಾಹ ಸಮಾರಂಭದ ವಿಡಿಯೋ ಎನ್ನಲಾಗಿದೆ.
ಇದರಲ್ಲಿ, ಬಬ್ಬನ್ ಸಿಂಗ್ ರಘುವಂಶಿ ಮಹಿಳಾ ನರ್ತಕಿಯೊಂದಿಗೆ ಅಶ್ಲೀಲ ಕೃತ್ಯಗಳನ್ನು ಮಾಡುವುದನ್ನು ಕಾಣಬಹುದು. ಬಿಜೆಪಿ ನಾಯಕ ಬಬನ್ ಸಿಂಗ್ ರಘುವಂಶಿ ಮಹಿಳಾ ಡ್ಯಾನ್ಸರ್ ಜೊತೆ ಅಶ್ಲೀಲವಾಗಿ ವರ್ತಿಸಿ ಆಕೆಯ ಖಾಸಗಿ ಅಂಗಳನ್ನು ಮುಟ್ಟಿ ವಿಕೃತ ಆನಂದ ಪಡೆಯುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ.