ಬೆಂಗಳೂರು, ಮೇ 07: ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಹೆಸರಲ್ಲಿ ಇಂದು ಬೆಳ್ಳಂಬೆಳಿಗ್ಗೆ ಪಾಕ್ನ ಉಗ್ರರ ನೆಲೆಗಳ ಮೇಲೆ ಕ್ಷಿಪಣಿ ದಾಳಿ ಮಾಡಿದೆ. ಭಯೋತ್ಪಾದಕರ 9 ನೆಲೆಗಳನ್ನು ಧ್ವಂಸಗೊಳಿಸುವ ಮೂಲಕ ನವ ವಧುವಿನ ಕುಂಕುಮ ಅಳಿಸಿದ್ದ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದೆ. ಸದ್ಯ ಪ್ರತೀಕಾರ ತೀರಿಸಿಕೊಂಡ ಹಿನ್ನೆಲೆ ಸೋಶಿಯಲ್ ಮೀಡಿಯಾದಲ್ಲಿ ಸಂಭ್ರಮಿಸಲಾಗುತ್ತಿದೆ. ಆದರೆ ಈ ಹೊತ್ತಲ್ಲೇ ಟ್ವೀಟ್ ಮಾಡುವ ಮೂಲಕ ಶಾಂತಿ ಮಂತ್ರ ಜಪಿಸಿದ್ದ ಕರ್ನಾಟಕ ಕಾಂಗ್ರೆಸ್ ಅನ್ನು ಜನರು ತೀವ್ರ ತರಾಟೆ ತೆಗೆದುಕೊಂಡಿದ್ದಾರೆ. ಆಕ್ರೋಶ ಬೆನ್ನಲ್ಲೇ ಇದೀಗ ಕಾಂಗ್ರೆಸ್ ತನ್ನ ಟ್ವೀಟ್ನ್ನು ಡಿಲೀಟ್ ಮಾಡಿದೆ.
ವಿಶ್ವದ ಬಲಿಷ್ಠ ವಾಯುಪಡೆಗಳಲ್ಲಿ ಒಂದು ಎಂದು ಗುರುತಿಸಿಕೊಂಡಿರುವ ಭಾರತೀಯ ವಾಯುಪಡೆ ಪಾಕ್ ಮೇಲೆ ದಾಳಿ ಮಾಡುವ ಮೂಲಕ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸೂಕ್ತ ಉತ್ತರ ನೀಡಿದೆ. ನಾವು ಸರ್ಕಾರದೊಂದಿಗೆ ಮತ್ತು ಭದ್ರತಾ ಪಡೆಗಯೊಂದಿಗೆ ನಿಲ್ಲುತ್ತೇವೆ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ.