ಜೂ.13 ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

Ravi Talawar
ಜೂ.13 ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
WhatsApp Group Join Now
Telegram Group Join Now


ಬಳ್ಳಾರಿ,ಜೂ.11: ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11 ಕೆವಿ ದಕ್ಷಿಣ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣೆ ಮತ್ತು ದುರಸ್ಥಿ ಕಾರ್ಯ ತುರ್ತಾಗಿ ಕೈಗೊಳ್ಳುತ್ತಿರುವುದರಿಂದ ಜೂ.13 ರಂದು ಬೆಳಿಗ್ಗೆ 08 ರಿಂದ ಸಂಜೆ 06 ಗಂಟೆಯವರೆಗೆ ವಿವಿಧ 11 ಕೆ.ವಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:

ಎಫ್-43 ಸಿದ್ಧಾಪುರ ರಸ್ತೆ ಕೈಗಾರಿಕಾ ಮಾರ್ಗದ ಟಪಾಲ್ ಸ್ಟೀಲ್, ಸಿದ್ಧಾಪುರ ಕೈಗಾರಿಕಾ ಪ್ರದೇಶ. ಎಫ್-30 ಗುಗರಹಟ್ಟಿ ನಗರ ಮಾರ್ಗದ ಗುಗ್ಗರಹಟ್ಟಿ ಗ್ರಾಮ, ಮುಂಡರಗಿ ಬೈಪಾಸ್ ರಸ್ತೆ.
ಎಫ್-27 ಆಂಧ್ರಾಳ್ ನಗರ ಮಾರ್ಗದ ಆಂಧ್ರಾಳ್, ಪಾತ್ರಬೂದಿಹಾಳ್, ಮಂಗಮ್ಮ ಕ್ಯಾಂಪ್ ಗ್ರಾಮಗಳು. ಎಫ್-29 ಮಿಂಚೇರಿ ಎನ್‌ಜೆವೈ ಮಾರ್ಗದ ಮಿಂಚೇರಿ ಗ್ರಾಮ, ಸಂಜೀವರಾಯನ ಕೋಟೆ ಗ್ರಾಮ, ಮುಂಡರಗಿ ಗ್ರಾಮ, ಚರಕುಂಟೆ ಗ್ರಾಮ ಮತ್ತು ಎಫ್-26 ಚರಕುಂಟೆ ಐಪಿ ಫೀಡರ್ ಮಾರ್ಗದ ಮುಂಡರಗಿ, ಚರಕುಂಟೆ, ವೈ.ಬೂದಿಹಾಳ್ ಕೃಷಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂ ಪ್ರಕಟಣೆ ತಿಳಿಸಿದೆ.

WhatsApp Group Join Now
Telegram Group Join Now
Share This Article