ಪಠ್ಯಾಧಾರಿತ ಕಲಿಕೆಯ ಜೊತೆಗೆ ಪ್ರಾಯೋಗಿಕ ಶಿಕ್ಷಣ ಹೆಚ್ಚು ಪರಿಣಾಮಕಾರಿ : ಡಾ. ವಿ. ಎಸ್. ಪಾಟೀಲ

Hasiru Kranti
ಪಠ್ಯಾಧಾರಿತ ಕಲಿಕೆಯ ಜೊತೆಗೆ ಪ್ರಾಯೋಗಿಕ ಶಿಕ್ಷಣ ಹೆಚ್ಚು ಪರಿಣಾಮಕಾರಿ : ಡಾ. ವಿ. ಎಸ್. ಪಾಟೀಲ
WhatsApp Group Join Now
Telegram Group Join Now

ಕೆ. ಎಲ್. ಇ. ಕೃಷಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ
ನೇಸರಗಿ: ಕೆ. ಎಲ್. ಇ. ಕೃಷಿ ಮಹಾವಿದ್ಯಾಲಯ, ತೆನಿಕೊಳ್ಳದಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನದ ಸ್ಮರಣಾರ್ಥವಾಗಿ ರಾಷ್ಟ್ರೀಯ ಯುವ ದಿನಾಚರಣೆಯನ್ನು ʼನವಾಂಕುರʼ ಎಂಬ ಶೀರ್ಷಿಕೆಯಡಿಯಲ್ಲಿ ದಿನಾಂಕ ೧೨.೦೧.೨೦೨೬ರಂದು ಭವ್ಯವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ. ಎಲ್. ಇ. ಕೃಷಿ ಮಹಾವಿದ್ಯಾಲಯದ ವಿದ್ಯಾಧಿಕಾರಿಗಳಾದ ಡಾ. ವಿ. ಎಸ್. ಪಾಟೀಲ ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪ್ರಗತಿಪರ ರೈತರಾದ ಶ್ರೀ ಅವಿನಾಶ ದೇಸಾಯಿ ಭಾಗವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಮಾತನಾಡಿದ ಶ್ರೀ ಅವಿನಾಶ ದೇಸಾಯಿ, ಶಿಕ್ಷಣ ಕ್ಷೇತ್ರದಲ್ಲಿ ಕೆ. ಎಲ್. ಇ ಸಂಸ್ಥೆಯು ಅಪಾರವಾದ ಕೊಡುಗೆಯನ್ನು ನೀಡಿದ್ದು, ಗುಣಮಟ್ಟದ ಶಿಕ್ಷಣಕ್ಕಾಗಿ ಹೆಸರುವಾಸಿಯಾಗಿದೆ ಎಂದು ಪ್ರಶಂಸಿಸಿದರು. ಇಂದಿನ ಕೃಷಿ ಕ್ಷೇತ್ರ ದಿನೇ ದಿನೇ ಬದಲಾಗುತ್ತಿದ್ದು, ರೈತರು ಆಧುನಿಕ ತಂತ್ರಜ್ಞಾನ ಮತ್ತು ಬದಲಾವಣೆಗಳನ್ನು ಅಳವಡಿಸಿಕೊಂಡಾಗ ಮಾತ್ರ ಕೃಷಿಯಲ್ಲಿ ಯಶಸ್ಸು ಸಾಧ್ಯ ಎಂದು ಆಭಿಪ್ರಾಯಪಟ್ಟರು. ಪಠ್ಯಾಧಾರಿತ ಕಲಿಕೆಯ ಜೊತೆಗೆ ಪ್ರಾಯೋಗಿಕ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿದಾಗ ಮಾತ್ರ ಕಲಿಕೆ ಪರಿಣಾಮಕಾರಿಯಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷೀಯ ಭಾಷಣದಲ್ಲಿ ಡಾ. ವಿ. ಎಸ್. ಪಾಟೀಲರವರು ಮಾತನಾಡಿ, ಕೆ. ಎಲ್. ಇ. ಕೃಷಿ ಮಹಾವಿದ್ಯಾಲಯ ಅತ್ಯುತ್ತಮ ಮೂಲಸೌಕರ್ಯ ಮತ್ತು ಸೌಲಭ್ಯಗಳನ್ನು ಹೊಂದಿದ್ದು, ವಿದ್ಯಾರ್ಥಿಗಳು ಅವುಗಳನ್ನು ಸಮರ್ಪಕವಾಗಿ ಉಪಯೋಗಿಸಿಕೊಳ್ಳಬೇಕು ಎಂದು ತಿಳಿಸಿದರು. ಕೃಷಿಯನ್ನು ಕೇವಲ ಅಧ್ಯಯನದ ವಿಷಯವಾಗಿ ಮಾತ್ರವಲ್ಲದೇ, ವೃತ್ತಿಯಾಗಿ ಸ್ವೀಕರಿಸಿ ದೇಶಸೇವೆಗೆ ಮುಂದಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಜೊತೆಗೆ, ಕೃಷಿ ಕ್ಷೇತ್ರದಲ್ಲಿರುವ ವಿವಿಧ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಶ್ರೀ ಅವಿನಾಶ ದೇಸಾಯಿ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಡಾ.ಮಂಜುನಾಥ ಚೌರಡ್ಡಿ, ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರು, Iಅಂಖ-ಏಐಇ ಏಗಿಏ,, ಮತ್ತಿಕೊಪ್ಪ ಮತ್ತು ಡಾ. ಶಿವಾನಂದ ಗೌಡ್ರ, ಪ್ರಾಂಶುಪಾಲರು (ಕೃಷಿ ಡಿಪ್ಲೋಮಾ) ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಡಾ. ಪೃಥ್ವಿ ಹೆಗಡೆ ನಿರೂಪಿಸಿದರು. ಡಾ. ಸೌರಭ ಮುನ್ನೋಳ್ಳಿ ಅತಿಥಿಗಳನ್ನು ಸ್ವಾಗತಿಸಿದರು ಹಾಗೂ ಡಾ. ಸ್ಪೂರ್ತಿ ಶಂಕರ ವಂದನಾರ್ಪಣೆ ಸಲ್ಲಿಸಿದರು. ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗವು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮಕ್ಕೆ ಯಶಸ್ಸು ತಂದರು.

 

WhatsApp Group Join Now
Telegram Group Join Now
Share This Article