ಶಾನ್ವಿ ಎಂಟರ್‌ಟೇನ್ಮೆಂಟ್ ಮೂಲಕ ದೀಪು ಬಿ.ಎಸ್ ನಿರ್ಮಿಸಿರುವ, ನವೀನ್ ಮತ್ತು ಮಾನಸಾ ಕೆ ಸಹ ನಿರ್ಮಾಣದಲ್ಲಿ ಮೂಡಿ ಬಂದಿರುವ ಸಿನಿಮಾ ‘ರಾಕ್ಷಸ’. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇವತ್ತು ಶಿವರಾತ್ರಿ ಹಬ್ಬದ ವಿಶೇಷವಾಗಿ ಚಿತ್ರ ತೆರೆಗೆ ಬರಬೇಕಿತ್ತು. ಆದರೆ ರಾಕ್ಷಸ ಬಿಡುಗಡೆ ದಿನಾಂಕ ಮುಂದೂಡಲಾಗಿದೆ.
ಪ್ರತಿ ಸಿನಿಮಾಗಳಲ್ಲಿಯೂ ಭಿನ್ನ ವಿಭಿನ್ನ ಪಾತ್ರಗಳ ಮೂಲಕ ರಂಜಿಸುವ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ‘ರಾಕ್ಷಸ’ ಚಿತ್ರದ ಮೂಲಕ ಮಾರ್ಚ್ 7ಕ್ಕೆ
ಪ್ರೇಕ್ಷಕರ ಎದುರು ಬರಲು ಸಜ್ಜಾಗಿದ್ದಾರೆ. ಬಹಳ ವಿಭಿನ್ನವಾದ ಪಾತ್ರದಲ್ಲಿ ಡೈನಾಮಿಕ್ ಪ್ರಿನ್ಸ್ ಕಾಣಿಸಿಕೊಂಡಿದ್ದಾರೆ. ಲೋಹಿತ್ ಎಚ್ ನಿರ್ದೇಶನದಲ್ಲಿ ಟೈಮ್ ಲೂಪ್ ಹಾರರ್ ಚಿತ್ರದಲ್ಲಿ ಸೋನಲ್ ಮೊಂಥೆರೋ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ಶೋಭಾರಾಜ್, ವತ್ಸಲಾಮೋಹನ್, ಸಿದ್ಲಿಂಗು ಶ್ರೀಧರ್, ಆರ್ನ ರಾಥೋಡ್ ಹಲವು ಕಲಾವಿದರು ತಾರಾಬಳಗವಿದೆ.
ಚಿತ್ರಕ್ಕೆ ಜೇಬಿನ್ ಪಿ ಜೋಕಬ್ ಕ್ಯಾಮರಾವರ್ಕ್, ವಿನೋದ್ ಸಾಹಸ ನಿರ್ದೇಶನ, ಅಜನೀಶ್ ಲೋಕನಾಥ್ ಸಂಗೀತವಿದೆ.