ಮೋದಿಯ ಪಾದ ಮುಟ್ಟಿದ್ದಕ್ಕೆ ನಿತೀಶ್ ಕುಮಾರ್ ವಿರುದ್ಧ ಪ್ರಶಾಂತ್ ಕಿಶೋರ್ ವಾಗ್ದಾಳಿ

Ravi Talawar
ಮೋದಿಯ ಪಾದ ಮುಟ್ಟಿದ್ದಕ್ಕೆ ನಿತೀಶ್ ಕುಮಾರ್ ವಿರುದ್ಧ ಪ್ರಶಾಂತ್ ಕಿಶೋರ್ ವಾಗ್ದಾಳಿ
WhatsApp Group Join Now
Telegram Group Join Now

ನವದೆಹಲಿ: ಎನ್​ಡಿಎ ಸರ್ಕಾರ ರಚನೆ ಮಾಡುವ ಹಿನ್ನೆಲೆಯಲ್ಲಿ ಬಿಹಾರದ ಮುಖ್ಯಮಂತ್ರಿ ಮತ್ತು ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್  ಕಳೆದ ವಾರ ನರೇಂದ್ರ ಮೋದಿ ಅವರನ್ನು ಲೋಕಸಭೆಯ ನಾಯಕರಾಗಿ ಹೆಸರಿಸುವ ಪ್ರಸ್ತಾಪವನ್ನು ಬೆಂಬಲಿಸಿದ್ದರು.

ಸಂಸದೀಯ ಪಕ್ಷದ ನಾಯಕರಾಗಿ ನರೇಂದ್ರ ಮೋದಿ ಅವರ ಹೆಸರನ್ನು ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ಎಚ್‌ಡಿ ಕುಮಾರಸ್ವಾಮಿ, ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್ ಸೇರಿದಂತೆ ಎಲ್ಲಾ ಪ್ರಮುಖ ನಾಯಕರು ಬೆಂಬಲಿಸಿದರು.

ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೈತ್ರಿಕೂಟದ ನಾಯಕರಾಗಿ ನರೇಂದ್ರ ಮೋದಿಯವರ ಹೆಸರಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಲು ಎದ್ದ ನಿತೀಶ್ ಕುಮಾರ್ ಅವರಿಗೆ ಮೋದಿ ತಮ್ಮ ಎದುರಿನಿಂದ ಹಾದುಹೋಗಲು ದಾರಿ ಮಾಡಿಕೊಟ್ಟರು.

ಆಗ ನಿತೀಶ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿಯವರ ಹೆಸರಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ ನಂತರ ಮೋದಿಯವರ ಪಾದಗಳನ್ನು ಸ್ಪರ್ಶಿಸಲು ಬಗ್ಗಿದರು. ಅದಕ್ಕೆ ಬೇಡವೆಂದ ನರೇಂದ್ರ ಮೋದಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ತಬ್ಬಿಕೊಂಡು, ಕೈ ಕುಲುಕಿದ್ದರು.

ನಿತೀಶ್ ಕುಮಾರ್ ಪ್ರಧಾನಿ ಮೋದಿ ಅವರ ಕಾಲಿಗೆ ಬೀಳಲು ಪ್ರಯತ್ನಿಸಿದ್ದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಬಿಹಾರದ ಸಿಎಂ ನಿತೀಶ್ ಕುಮಾರ್ ಅವರು ಅಧಿಕಾರದಲ್ಲಿ ತಮ್ಮ ಸ್ವಾರ್ಥಕ್ಕೆ ಏನು ಬೇಕಾದರೂ ಮಾಡುತ್ತಿದ್ದಾರೆ ಎಂದು ಪ್ರಶಾಂತ್ ಕಿಶೋರ್ ಆರೋಪಿಸಿದ್ದಾರೆ. ಇದು ಬಿಹಾರದ ಜನತೆಗೆ ನಾಚಿಕೆಗೇಡಿನ ಸಂಗತಿ ಎಂದು ಅವರು ಟೀಕಿಸಿದ್ದಾರೆ.

WhatsApp Group Join Now
Telegram Group Join Now
Share This Article