ತುಮಕೂರು, ಡಿಸೆಂಬರ್ 16: ಕೃಷಿ ಹೊಂಡಕ್ಕೆ ಸೋಡಿಯಂ ಎಸೆದು ಸ್ಫೋಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ಗೆ ಡಿಸೆಂಬರ್ 26ರವರೆಗೂ ನ್ಯಾಯಾಂಗ ಬಂಧನ ಮಧುಗಿರಿಯ ಜೆಎಂಎಫ್ಸಿ ನ್ಯಾಯಾಲಯ ಆದೇಶಿಸಿದೆ. ಅನುಮತಿ ಇಲ್ಲದೇ ಸ್ಫೋಟಗೊಳಿಸಿದ್ದಕ್ಕೆ ಡ್ರೋನ್ ಪ್ರತಾಪ್ನನ್ನು ಮಿಡಿಗೇಶಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಸೋಮವಾರ (ಡಿ.16) ನ್ಯಾಯಾಲಯದ ಮುಂದೆ ಹಾಜಪಡಿಸಿದರು.
ಸೋಮವಾರ (ಡಿ.16) ಪೊಲೀಸ್ ಕಸ್ಟಡಿ ಅಂತ್ಯವಾಗಿದ್ದು, ಪೊಲೀಸರು ಡ್ರೋನ್ ಪ್ರತಾಪ್ ಅವರನ್ನು ನಾಯ್ಯಾಲಯದ ಮುಂದೆ ಹಾಜರುಪಡಿಸಿದರು. ನ್ಯಾಯಾಲಯ ಡ್ರೋನ್ ಪ್ರತಾಪ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದೆ.
ಪ್ರಕರಣ ಸಂಬಂಧ ಡ್ರೋನ್ ಪ್ರತಾಪ್ ಅವರ ವಿರುದ್ಧ ಮಿಡಿಗೇಶಿ ಠಾಣೆ ಪೊಲೀಸರು BNS ಸೆಕ್ಷನ್ 288 ಮತ್ತು ಸ್ಫೋಟ ವಸ್ತು ನಿಯಂತ್ರಣ ಕಾಯ್ದೆ 3ರ ಅಡಿ ಪ್ರಕರಣ ದಾಖಲಿಸಿದ್ದಾರೆ.