ಬಳ್ಳಾರಿ,ಅ.16 ಜಿಲ್ಲಾ ಕೇಂದ್ರದಲ್ಲಿ 70ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸುವ ಕುರಿತಂತೆ ಚರ್ಚಿಸಲು ಅ.17 ರಂದು ಮಧ್ಯಾಹ್ನ 03 ಗಂಟೆಗೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ಏರ್ಪಡಿಸಲಾಗಿದೆ.
ಸಭೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಕನ್ನಡಪರ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಕನ್ನಡಾಭಿಮಾನಿಗಳು ನಿಗದಿಪಡಿಸಿದ ಸಮಯಕ್ಕೆ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.
ಕನ್ನಡ ರಾಜ್ಯೋತ್ಸವ ದಿನಾಚರಣೆ; ಅ.17 ರಂದು ಪೂರ್ವಭಾವಿ ಸಿದ್ಧತಾ ಸಭೆ
