ಧಾರವಾಡ: ಸ್ವಾತಂತ್ರ್ಯೋತ್ಸವದ ನಿಮಿತ್ತ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣ ಆವರಣದಲ್ಲಿ ಆಯೋಜಿಸುವ ವಸ್ತು ಪ್ರದರ್ಶನ ಮಳಿಗೆಗಳ ಸಿದ್ಧತೆ ಕುರಿತು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಕರ್ನಾಟಕ ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕಿ ಗರಿಮಾ ಪವಾರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ, ಸಿದ್ಧತೆ ಕುರಿತು ಚರ್ಚಿಸಿದರು.