ನ್ಯಾಷನಲ್​ ಹೆರಾಲ್ಡ್​ ಪ್ರಕರಣ ಸಂಬಂಧ ರಾಹುಲ್​ ಗಾಂಧಿಗೆ ಸಮನ್ಸ್​ ಕಳುಹಿಸಲು ಇಡಿ ಸಿದ್ಧತೆ

Ravi Talawar
ನ್ಯಾಷನಲ್​ ಹೆರಾಲ್ಡ್​ ಪ್ರಕರಣ ಸಂಬಂಧ ರಾಹುಲ್​ ಗಾಂಧಿಗೆ ಸಮನ್ಸ್​ ಕಳುಹಿಸಲು ಇಡಿ ಸಿದ್ಧತೆ
WhatsApp Group Join Now
Telegram Group Join Now

ಕಾಂಗ್ರೆಸ್ ನಡೆಸುತ್ತಿದ್ದ ನ್ಯಾಷನಲ್ ಹೆರಾಲ್ಡ್​ ಪ್ರತಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣಗಳು, ಅವ್ಯವಹಾರಕ್ಕೆಸಿದಂತೆ ಸಂಸದ ರಾಹುಲ್​ಗಾಂಧಿಗೆ ನೋಟಿಸ್ ನೀಡಲು ಇಡಿ ಸಿದ್ಧತೆ ನಡೆಸಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯನ್ನು ಶೀಘ್ರದಲ್ಲೇ ಕರೆಸಿಕೊಳ್ಳಬಹುದು ಎಂದು ಹೇಳಲಾಗಿದೆ. ಈ ಬೆಳವಣಿಗೆಯನ್ನು ತಿಳಿದಿರುವ ಹಿರಿಯ ಅಧಿಕಾರಿಗಳು ಇದನ್ನು ಖಚಿತಪಡಿಸಿದ್ದಾರೆ.

ಈ ಪ್ರಕರಣದಲ್ಲಿ ಸಂಸ್ಥೆ ಈಗಾಗಲೇ 751 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ಇದಕ್ಕೂ ಮೊದಲು ಜೂನ್ 2022 ರಲ್ಲಿ, ಇಡಿ ನಾಲ್ಕು ಸಭೆಗಳಲ್ಲಿ ರಾಹುಲ್​ ಗಾಂಧಿಯನ್ನು ಸುಮಾರು 40 ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು. ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಎಜೆಎಲ್‌ಗೆ ನೀಡಿದ 90.21 ಕೋಟಿ ರೂಪಾಯಿಗಳ ಸಾಲ ಮತ್ತು ಮುಂಬೈನಲ್ಲಿನ ಆಸ್ತಿಯ ಅಭಿವೃದ್ಧಿಗೆ ಸಂಬಂಧಿಸಿದ ವ್ಯವಹಾರಗಳ ಬಗ್ಗೆಯೂ ವಿಚಾರಣೆ ನಡೆಸಲಾಯಿತು .

ಜುಲೈ 2022 ರಲ್ಲಿ ಮೂರು ದಿನಗಳ ಕಾಲ ಸುಮಾರು 11 ಗಂಟೆಗಳ ಕಾಲ ಸೋನಿಯಾ ಗಾಂಧಿಯವರನ್ನೂ ಈ ವಿಷಯದಲ್ಲಿ ವಿಚಾರಣೆ ನಡೆಸಲಾಯಿತು. ಆರ್ಥಿಕ ಅಪರಾಧಗಳ ತನಿಖಾ ಸಂಸ್ಥೆಯು ಸೋನಿಯಾ ಗಾಂಧಿ ಅವರನ್ನು ಮತ್ತೊಮ್ಮೆ ವಿಚಾರಣೆಗೆ ಕರೆಸಿಕೊಳ್ಳುವ ಬಗ್ಗೆ ಯೋಚಿಸುತ್ತಿದೆಯೇ ಅಥವಾ ಇಲ್ಲವೇ ಎಂಬುದು ಸ್ಪಷ್ಟವಾಗಿಲ್ಲ.

 

WhatsApp Group Join Now
Telegram Group Join Now
Share This Article