ಗದಗ, ಅಕ್ಟೊಬರ್ 10: ಹಾವೇರಿ ಮತ್ತು ಗದಗ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ ಅನುಷ್ಠಾನಗೊಳ್ಳಲಿದ್ದು, ನಾಳೆ ಅ.11 ಈ ಯೋಜನೆಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ದೇಶಾದ್ಯಂತ ಆಯ್ದ 100 ಜಿಲ್ಲೆಗಳಲ್ಲಿ ಕೃಷಿ ಹಾಗೂ ಸಂಬಂಧಿತ ಕ್ಷೇತ್ರಗಳ ಬೆಳವಣಿಗೆಗೆ ಉತ್ತೇಜಿಸುವುದು ಯೋಜನೆಯ ಗುರಿ. ಈ ಯೋಜನೆಯಡಿಯಲ್ಲಿ ಕೃಷಿ ಉತ್ಪನ್ನ ಹೆಚ್ಚಳ ಹಾಗೂ ವಿವಿಧ ದವಸ ಧಾನ್ಯ ಬೆಳೆಯುವಿಕೆ, ನೀರಾವರಿ ಸೌಲಭ್ಯ, ರೈತರಿಗೆ ಅಲ್ಪಾವಧಿ ಮತ್ತು ದೀರ್ಘಾವಧಿ ಹಣಕಾಸು ನೆರವು ದೊರೆಯಲಿದೆ.


