ದೆಹಲಿ ಆಗಸ್ಟ್ 31: ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ದೇಶಕ್ಕೆ ತ್ವರಿತ ತೀರ್ಪು ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ. ಮಹಿಳೆಯರ ಮೇಲಿನ ದೌರ್ಜನ್ಯಗಳು ಮತ್ತು ಮಕ್ಕಳ ಸುರಕ್ಷತೆಯು ಸಮಾಜಕ್ಕೆ ಗಂಭೀರ ಕಾಳಜಿಯ ವಿಷಯವಾಗಿದೆ ಎಂದಿದ್ದಾರೆ ಮೋದಿ. ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳಾ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣದ ಆಕ್ರೋಶದ ನಡುವೆಯೇ ಪ್ರಧಾನಿ ಈ ಹೇಳಿಕೆ ನೀಡಿದ್ದಾರೆ.
ಸುಪ್ರೀಂಕೋರ್ಟ್‌ಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮೋದಿ ಮಹಿಳೆಯರ ಸುರಕ್ಷತೆಗಾಗಿ ದೇಶದಲ್ಲಿ ಅನೇಕ ಕಠಿಣ ಕಾನೂನುಗಳನ್ನು ಮಾಡಲಾಗಿದೆ, ಆದರೆ ನಾವು ಅದನ್ನು ಇನ್ನಷ್ಟು ಕ್ರಿಯಾಶೀಲಗೊಳಿಸಬೇಕಾಗಿದೆ ಎಂದು ಹೇಳಿದ್ದಾರೆ.