ಇಟಲಿಯಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಪಾಳ್ಗೊಳ್ಳಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ

Ravi Talawar
ಇಟಲಿಯಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಪಾಳ್ಗೊಳ್ಳಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ
WhatsApp Group Join Now
Telegram Group Join Now

ಇಟಲಿ,14: ಪ್ರಧಾನಿ ನರೇಂದ್ರ ಮೋದಿ ಇಟಲಿಯಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಪಾಳ್ಗೊಳ್ಳಲಿದ್ದಾರೆ. ಇಂದು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಹಾಗೂ ಪ್ರಧಾನಿ ಮೋದಿ ನಡುವೆ ದ್ವಿಪಕ್ಷೀಯ ಮಾತುಕತೆಗಳು ನಡೆಯಲಿವೆ. ಸತತ ಮೂರನೇ ಅವಧಿಗೆ ಅಧಿಕಾರ ವಹಿಸಿಕೊಂಡ ನಂತರ ಪ್ರಧಾನಿ ಮೋದಿಯವರ ಮೊದಲ ವಿದೇಶ ಪ್ರವಾಸ ಇದಾಗಿದೆ.

ಬೋರ್ಗೊ ಎಗ್ನಾಜಿಯಾದ ಐಷಾರಾಮಿ ರೆಸಾರ್ಟ್‌ನಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯಲ್ಲಿ ವಿಶ್ವದ ಗಣ್ಯ ನಾಯಕರ ಜೊತೆಗೆ ಜನರ ಜೀವನ ಸುಧಾರಿಸುವ ಹಾಗೂ ಕೃತಕ ಬುದ್ಧಿಮತ್ತೆ, ಶಕ್ತಿ, ಆಫ್ರಿಕಾ-ಮೆಡಿಟರೇನಿಯನ್ ವಿಷಯ ಸೇರಿದಂತೆ ಹಲವು ವಿಚಾರಗಳ ಕುರಿತು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ಇಟಾಲಿಯನ್ ಪ್ರಧಾನಿ ಜಾರ್ಜಿಯಾ ಮೆಲೋನಿ, ಪೋಪ್ ಫ್ರಾನ್ಸಿಸ್ ಅವರು ಸಹ ಇರಲಿದ್ದಾರೆ.

ಅಪುಲಿಯಾದಲ್ಲಿ ಶೃಂಗಸಭೆಯಲ್ಲಿ ಅವರು ಭಾಗಿಯಾಗಲಿದ್ದು, ಅಲ್ಲಿ ಅವರು ವಿಶ್ವ ನಾಯಕರೊಂದಿಗೆ ಹಲವು ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ ಎಂದು ಭಾರತದ ದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕೃತ ವಕ್ತಾರ ರಣಧೀರ್ ಜೈಸ್ವಾಲ್ ವಿಡಿಯೋ ಮೂಲಕ ಖಚಿತಪಡಿಸಿದ್ದಾರೆ.

WhatsApp Group Join Now
Telegram Group Join Now
Share This Article