ಬೆಂಗಳೂರು: ಖಾಸಗಿ ವಾಣಿಜ್ಯ ವಾಹನ ಚಾಲಕರು ಮತ್ತು ಮಾಲೀಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ಕ್ಷೇತ್ರವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಭಾರತೀಯ ವಾಹನ ಚಾಲಕರ ಕಾರ್ಮಿಕ ಸಂಘ ಮತ್ತು ಸ್ನೇಹಜೀವಿ ಚಾಲಕರ ಕಾರ್ಮಿಕ ಸಂಘದ ಪ್ರತಿನಿಧಿಗಳು ಸಾರಿಗೆ ಇಲಾಖೆ ರಾಜ್ಯ ಸರ್ಕಾರಕ್ಕೆ ಆದಾಯ ತರುವ ಪ್ರಮುಖ ವಲಯಗಳಲ್ಲಿ ಒಂದಾಗಿದೆ. ಆದರೆ ಬಜೆಟ್‌ನಲ್ಲಿ ಇದನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ ಎಂದು ಹೇಳಿದ್ದಾರೆ.
“ಚಾಲಕರು ಮತ್ತು ಮಾಲೀಕರ ಸಮುದಾಯದ ಭಾಗವಾಗಿ, ನಾವು ಬಜೆಟ್ ಪೂರ್ವ ಸಭೆಯಲ್ಲಿ ಮುಖ್ಯಮಂತ್ರಿಗೆ ಅನೇಕ ಸಲಹೆಗಳನ್ನು ನೀಡಿದ್ದೇವೆ. ಆದಾಗ್ಯೂ, ನಮ್ಮ ಯಾವುದೇ ಬೇಡಿಕೆಗಳು ಬಜೆಟ್‌ನಲ್ಲಿ ಈಡೇರಿಸಿಲ್ಲ” ಎಂದು ಭಾರತೀಯ ವಾಹನ ಚಾಲಕರ ಸಂಘದ ಅಧ್ಯಕ್ಷ ಗಂಡಸಿ ಸದಾನಂದ ಸ್ವಾಮಿ ಹೇಳಿದ್ದಾರೆ.