ಬೆಂಗಳೂರು, ಅಕ್ಟೋಬರ್ 16: ಸರ್ಕಾರಿ ಶಾಲೆಯ ಆವರಣ ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸಂಬಂಧಪಟ್ಟ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳನ್ನು ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ , ಇದೀಗ ಮುಖ್ಯಮಂತ್ರಿಗಳಿಗೆ ಮತ್ತೊಂದು ಪತ್ರ ಬರೆದಿದ್ದಾರೆ. ಸರ್ಕಾರಿ ನೌಕರರು ಮತ್ತು ಅಧಿಕಾರಿಗಳು ಆರ್ಎಸ್ಎಸ್ ಚಟುವಟಿಕೆಗಳಲ್ಲಿ ಭಾಗಿಯಾಗುವುದಕ್ಕೆ ಕಡಿವಾಣ ಹಾಕಬೇಕು ಎಂದು ಅವರು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ಆಗ್ರಹಿಸಿದ್ದಾರೆ.
ಬೆದರಿಕೆ ಮಧ್ಯೆ ಆರ್ಎಸ್ಎಸ್ ಕುರಿತು ಪ್ರಿಯಾಂಕ್ ಸಿಎಂಗೆ ಮತ್ತೊಂದು ಪತ್ರ
