I.N.D.I.A ಒಕ್ಕೂಟ ಅಧಿಕಾರಕ್ಕೆ ಬಂದರೆ ಮಹಿಳೆಯರ ಖಾತೆಗೆ ಪ್ರತೀ ತಿಂಗಳು 8,500 ರೂ: ಪ್ರಿಯಾಂಕಾ ಗಾಂಧಿ

Ravi Talawar
I.N.D.I.A ಒಕ್ಕೂಟ ಅಧಿಕಾರಕ್ಕೆ ಬಂದರೆ ಮಹಿಳೆಯರ ಖಾತೆಗೆ ಪ್ರತೀ ತಿಂಗಳು 8,500 ರೂ: ಪ್ರಿಯಾಂಕಾ ಗಾಂಧಿ
WhatsApp Group Join Now
Telegram Group Join Now

ರಾಯ್ ಬರೇಲಿ,16: ಹಾಲಿ ಲೋಕಸಭಾ ಚುನಾವಣೆಯಲ್ಲಿ INDI  ಅಧಿಕಾರಕ್ಕೆ ಬಂದರೆ ಮಹಿಳೆಯರ ಖಾತೆಗೆ ಪ್ರತೀ ತಿಂಗಳು 8,500 ರೂ ಜಮೆ ಮಾಡುವುದಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಗುರುವಾರ ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ನಡೆದ ಮಹಿಳೆಯರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ನೇತೃತ್ವದ INDIA ಮೈತ್ರಿಕೂಟ ಸರ್ಕಾರ ರಚನೆಯಾದರೆ ಮಹಿಳೆಯರ ಸಬಲೀಕರಣಕ್ಕಾಗಿ ಕೆಲಸ ಮಾಡುತ್ತದೆ.

ದೇಶದಾದ್ಯಂತ ನಮ್ಮ ಸಹೋದರಿಯರು ಉತ್ಸಾಹದಿಂದ INDIA ಸರ್ಕಾರವನ್ನು ರಚಿಸಲು ಸಿದ್ಧರಾಗಿದ್ದು, ಜುಲೈನಿಂದ, ಮಹಿಳೆಯರ ಖಾತೆಗೆ ಪ್ರತಿ ತಿಂಗಳು 8500 ರೂ. ಅಂದರೆ, ವಾರ್ಷಿಕವಾಗಿ 1 ಲಕ್ಷ ರೂ. ಠೇವಣಿ ಇಡುತ್ತೇವೆ. ಇದರಿಂದ ಪ್ರತಿ ಕುಟುಂಬದ ಆರ್ಥಿಕ ಸ್ಥಿತಿಯನ್ನು ಬದಲಾಯಿಸಬಹುದು ಎಂದು ಅವರು ಹೇಳಿದರು.

ಅಂತೆಯೇ ಸರ್ಕಾರಿ ಉದ್ಯೋಗಗಳ ಪಾಲು ಮಹಿಳಾ ಶಕ್ತಿಯನ್ನು ಬಲಪಡಿಸುತ್ತದೆ ಎಂದು ಅವರು ಒತ್ತಿ ಹೇಳಿದ ಪ್ರಿಯಾಂಕಾ, ‘ಆಶಾ, ಅಂಗನವಾಡಿ ಹಾಗೂ ಅಡುಗೆಯ ಸಹೋದರಿಯರ ಗೌರವಧನಕ್ಕೆ ಕೇಂದ್ರದ ಕೊಡುಗೆಯನ್ನು ದ್ವಿಗುಣಗೊಳಿಸಲಾಗುವುದು. 25 ಲಕ್ಷ ರೂ.ಗಳ ವಿಮಾ ಯೋಜನೆ ನಿಮ್ಮನ್ನು ವೈದ್ಯಕೀಯ ವೆಚ್ಚದ ಕೂಪದಿಂದ ಹೊರತರಲಿದೆ ಎಂದು ಭರವಸೆ ನೀಡಿದರು.

WhatsApp Group Join Now
Telegram Group Join Now
Share This Article