ಮೃತರ ಕುಟುಂಬಸ್ಥರಿಗೆ ದೇವರು ನೋವು ಭರಿಸುವ ಶಕ್ತಿ ಕೊಡಲಿ: ಸಂಸದೆ ಪ್ರಿಯಂಕಾ ಜಾರಕಿಹೊಳಿ ಸಂತಾಪ

Ravi Talawar
ಮೃತರ ಕುಟುಂಬಸ್ಥರಿಗೆ ದೇವರು ನೋವು ಭರಿಸುವ ಶಕ್ತಿ ಕೊಡಲಿ: ಸಂಸದೆ ಪ್ರಿಯಂಕಾ ಜಾರಕಿಹೊಳಿ ಸಂತಾಪ
WhatsApp Group Join Now
Telegram Group Join Now
ಬೆಳಗಾವಿ: ಮಹಾಕುಂಭಮೇಳದಿಂದ ವಾಪಾಸ್ ಆಗುವ ವೇಳೆ ಭೀಕರ ರಸ್ತೆ ಅಪಘಾತ ಸಂಭವಿಸಿ ಬೆಳಗಾವಿಯ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಇಂಥ ಸಂದರ್ಭದಲ್ಲಿ ಆ ಘಟನೆ ಆಗಬಾರದಿತ್ತು.‌ಆದರೆ, ಅನಾಹುತ ಸಂಭವಿಸಿದೆ. ಮೃತರ ಕುಟುಂಬಸ್ಥರಿಗೆ ದೇವರು ನೋವು ಭರಿಸುವ ಶಕ್ತಿ ಕೊಡಲಿ ಎಂದು ನಾನು ಕೇಳಿಕೊಳ್ಳುತ್ತೇನೆ ಎಂದು ಚಿಕ್ಕೋಡಿ ಸಂಸದೆ ಪ್ರಿಯಂಕಾ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ವಿಷಿಯ ತಿಳಿಸಿದ ಅವರು, ಈ ಮೊದಲು ಪ್ರಯಾಗ್​​ರಾಜ್​ನಲ್ಲಿ ನಾಲ್ವರು ಮೃತಪಟ್ಟಿದ್ದರು. ಆದರೆ ಮಹಾಕುಂಭಮೇಳದಿಂದ ವಾಪಾಸ್ ಆಗುವ  ಮತ್ತೆ ವಾಹನ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವುದು ಸಾಕಷ್ಟು ನೋವು ತಂದಿದೆ. ಈ ಘಟನೆಯಲ್ಲಿ ಬಸವನಗಲ್ಲಿಯ ಟಿಟಿ ಚಾಲಕ ಸಾಗರ ಶಾಪುರಕರ್, ಕ್ರಾಂತಿ ನಗರದ ನಿವಾಸಿ ನೀತಾ ಬಡಮಂಜಿ, ಶಿವಾಜಿನಗರದ ಸಂಗೀತಾ ಮೇತ್ರಿ, ವಡಗಾವಿಯ ಜ್ಯೋತಿ ಖಾಂಡೇಕರ್ ಕುಟುಂಬಸ್ಥರಿಗೆ  ಆ ದೇವರು ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article