ಬೆಳಗಾವಿ02: ಚಿಕ್ಕೋಡಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರ ಗೆಲುವು ನಿಶ್ಚಿತ’ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.
ಯಮಕನಮರಡಿ ವಿಧಾನಸಭಾ ಕ್ಷೇತ್ರದ ಇಸ್ಲಾಪೂರ, ಚಿಕ್ಕಲದಿನಿ ಹಾಗೂ ಗೆಜಪತ್ತಿ ಗ್ರಾಮದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ವೇಳೆ ಅವರು ಮಾತನಾಡಿ, ಕ್ಷೇತ್ರದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದದ್ದು ಖುಷಿ ತಂದಿದೆ. ಕಾಂಗ್ರೆಸ್ ಗೆ ಸೇರ್ಪಡೆಯಾದ ನೂತನ ಕಾರ್ಯಕರ್ತರು ಇಂದಿನಿಂದಲೇ ಪಕ್ಷವನ್ನು ಬೂತ್ ಮಟ್ಟದಲ್ಲಿ ಸಂಘಟಿಸಿ, ಚಿಕ್ಕೋಡಿ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರನ್ನು ಬಹು ಅಂತರದಿಂದ ಗೆಲ್ಲಿಸಬೇಕೆಂದು ತಿಳಿಸಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಚುನಾವಣೆಯಲ್ಲಿ ಭರವಸೆ ನೀಡಿದಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವ ಮೂಲಕ ಜನರ ಸಂಕಷ್ಟಕ್ಕೆ ನೆರವಾಗಿದ್ದೇವೆ. ನಮ್ಮ ಸಹೋದರಿ ಪ್ರಿಯಂಕಾ ಜಾರಕಿಹೊಳಿ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಒಂಬತ್ತು ತಿಂಗಳ ಒಳಗೆ ಐದು ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿದೆ. ಪ್ರತಿಯೊಂದು ಕುಟುಂಬಗಳಿಗೆ ನಾಲ್ಕರಿಂದ ಐದು ಸಾವಿರ ಹಣ ಉಳಿತಾಯವಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಿಂದ ಪ್ರತಿಯೊಂದು ಮನೆಯ ಗೃಹಿಣಿಯರು 2000 ಪಡೆದುಕೊಳ್ಳುತ್ತಿದ್ದಾರೆ. ವಿಧ್ಯುತ್ ಅನ್ನು ಉಚಿತವಾಗಿ ಪಡೆದುಕೊಳ್ಳುತ್ತಿದ್ದಾರೆ. ಶಕ್ತಿ ಯೋಜನೆಯಡಿ ಉಚಿತವಾಗಿ ಮಹಿಳೆಯರು ಪ್ರಯಾಣ ಮಾಡುತ್ತಿದ್ದಾರೆ. ಅನ್ನಭಾಗ್ಯದಲ್ಲಿ 5 ಕೆಜಿ ಅಕ್ಕಿ 5 ಕೆ.ಜಿ ಗೆ ಹಣವನ್ನು ಪಡೆಯುತ್ತಿದ್ದಾರೆ. ಅದ್ದರಿಂದ ಕಾರ್ಯಕರ್ತರು ಕಾಂಗ್ರೆಸ್ ಜಾರಿಗೆ ತಂದ ಯೋಜನೆ ಕುರಿತು ಮತದಾರರಿಗೆ ತಿಳಿಸಿ ಕೈ ಅಭ್ಯರ್ಥಿ ಗೆಲುವಿಗೆ ಶ್ರಮಿಸಿಬೇಕು ಎಂದರು.
ಇದೇ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ನೂತ ಕಾರ್ಯಕರ್ತರನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಪಕ್ಷದ ಶಾಲು ಹೊದಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಹಿರಿಯರು ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.