ಬೈಲಹೊಂಗಲ01: ಸಮೀಪದ ಗರ್ಜೂರ ಗ್ರಾಮದಲ್ಲಿ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಜಗದೀಶ ಶೆಟ್ಟರ ಅವರ ಪರ ಪ್ರಚಾರ ನಡೆಸಿ ಯುವ ಮೋರ್ಚಾ ಅಧ್ಯಕ್ಷ ಪ್ರಶಾಂತ ಅಮ್ಮಿನಭಾವಿ, ಜಿಲ್ಲಾ ಮಾಧ್ಯಮ ಪ್ರಮುಖ ಸಚಿನ್ ಕಡಿ ಅವರು ಮಾತನಾಡಿ ದೇಶದ ನರೇಂದ್ರ ಮೋದಿ ಅವರು ಜಾರಿಗೆ ತಂದ ಅನೇಕ ಜನಪ್ರಿಯ ಯೋಜನೆಗಳ ಬಗ್ಗೆ ಮನೆ ಮನೆಗೆ ತೆರಳಿ ಮಾಹಿತಿ ನೀಡಲು ಕರೆ ನೀಡಿದರು.ಕಾಂಗ್ರೆಸ್ ಅಭ್ಯರ್ಥಿ ಬಗ್ಗೆ ಮಾತನಾಡಿ ರಾಜಕೀಯ ಜ್ಞಾನ ಇಲ್ಲದ ವ್ಯಕ್ತಿಯನ್ನು ನಂಬಬೇಡಿ.ಜಗದೀಶ ಶೆಟ್ಟರ ಅವರು ಮುಖ್ಯಮಂತ್ರಿಯಾಗಿ, ವಿಧಾನಸಭಾ ಸಭಾಧ್ಯಕ್ಷರಾಗಿ,ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಅನೇಕ ಜನಪ್ರಿಯ ಕೊಡುಗೆ ನೀಡಿದ್ದಾರೆ.ಯಾರೋ ತಮ್ಮ ರಾಜಕೀಯ ಲಾಭಕ್ಕೆ ಹೇಳುವ ಮಾತುಗಳಿಗೆ ಕಿವಿಗೊಡಬೇಡಿ. ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡುವ ಸಂಕಲ್ಪ ಮಾಡೋಣ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶ್ರೀಧರ ಕುಮಾರ್ ಕುಲ್ಲೋಳ್ಳಿ,ರಾಜು ಗುಡಿಮನಿ, ಆದರ್ಶ ಕಡಕಭಾವಿ, ಸಿಧ್ಧಪ್ಪ ಗಣಾಚಾರಿ, ಗಂಗಯ್ಯ ಪೂಜೇರ,ಬಾಬು ಮಡ್ಡಿಮನಿ,ಸುನಿಲ ಕಡಕಭಾವಿ ಹಾಗೂ ಅನೇಕ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು