ಪ್ರೊ ವಿಜಯಾ ಬಿ. ಕೋರಿಶೆಟ್ಟಿಗೆ ಅಭಿಮಾನದ ಗೌರವ

Ravi Talawar
ಪ್ರೊ ವಿಜಯಾ ಬಿ. ಕೋರಿಶೆಟ್ಟಿಗೆ ಅಭಿಮಾನದ ಗೌರವ
WhatsApp Group Join Now
Telegram Group Join Now

ಹುಬ್ಬಳ್ಳಿ: ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿಗಳಾಗಿ ನೂತನವಾಗಿ ಆಯ್ಕೆಯಾದ ಪ್ರೊ ವಿಜಯಾ ಬಿ. ಕೋರಿಶೆಟ್ಟಿ ಅವರು ಹುಬ್ಬಳ್ಳಿಗೆ ಆಗಮಿಸಿದ್ದಾಗ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ಸದಸ್ಯರು ಪ್ರೊ ವಿಜಯಾ ಬಿ. ಕೋರಿಶೆಟ್ಟಿ ಅವರನ್ನು ಭೇಟಿ ಮಾಡಿ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಸಮಾಜಶಾಸ್ತ್ರ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ, ನೂತನ ಕುಲಪತಿ ಪ್ರೊ ವಿಜಯಾ ಬಿ. ಕೋರಿಶೆಟ್ಟಿ ಅವರಿಗೆ ಶಾಲು, ಗ್ರಂಥ ನೀಡಿ, ಮಾಲಾರ್ಪಣೆ ಮಾಡಿ ಅತ್ಯಂತ ಹೃದಯಸ್ಪರ್ಶಿಯಾಗಿ ಅಭಿಮಾನದಿಂದ ಆತ್ಮೀಯವಾಗಿ ಪ್ರೀತಿಯಿಂದ ಗೌರವಿಸಲಾಯಿತು. ಹುತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವು ಪ್ರೊ ವಿಜಯಾ ಬಿ. ಕೋರಿಶೆಟ್ಟಿ ಅವರ ಅವಧಿಯಲ್ಲಿ ಸರ್ವತೋಮುಖ ಅಭಿವೃದ್ದಿಯಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ದೇಶದಲ್ಲಿಯೇ ಪ್ರತಿಷ್ಠಿತ ವಿಶ್ವವಿದ್ಯಾಲಯವಾಗಿ ಹೊರಹೊಮ್ಮಲಿ, ಗುರುತಿಸುವಂತೆ ಆಗಲೆಂದು ಶುಭ ಕೋರಿದರು.

ಸೋಹನ ಸುರೇಶ ಹೊರಕೇರಿ, ವಿಜಯಪುರ, ಬಬಲೇಶ್ವರದಲ್ಲಿ ವೈದ್ಯರಾಗಿ ಸೇವೆಸಲ್ಲಿಸುತ್ತಿರುವ, ಪ್ರೊ ವಿಜಯಾ ಬಿ. ಕೋರಿಶೆಟ್ಟಿ ಅವರ ಪತಿ, ವೈದ್ಯ ಡಾ. ರಾಮನಗೌಡ ಪಾಟೀಲ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಅಧ್ಯಕ್ಷ, ಸಾಹಿತಿ ಪ್ರೊ ಎಸ್.ಎಂ.ಸಾತ್ಮಾರ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ‍್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ, ಅಖಿಲ ಕರ್ನಾಟಕ ಮಹಿಳಾ ಕನ್ನಡ ಸಾಹಿತ್ಯ ಪರಿಷತ್ ಹುಬ್ಬಳ್ಳಿ ತಾಲೂಕು ನಗರ ಘಟಕದ ಅಧ್ಯಕ್ಷ ಡಾ. ಸರ್ವಮಂಗಳಾ ಎಂ. ಕುದರಿ, ಮುಂತಾದವರು ಭಾಗವಹಿಸಿದ್ದರು.
ಸರ್ವಮಂಗಳಾ

WhatsApp Group Join Now
Telegram Group Join Now
Share This Article