ನೇಸರಗಿ: ಸಮೀಪದ ಹಣಬರಹಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ನೇಸರಗಿ ವಲಯದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನೆರವೇರಿತು.ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿಗಳಾದ ವಿಟ್ಟಲ್ ಪಿಸೆ ಹಾಗೂ ಶಾಲೆಯ ಮುಖ್ಯ ಗುರುಗಳಾದ ಗಾಯತ್ರಿ ಪತ್ತಾರ ನೆರವೇರಿಸಿದರು. ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕರಾದ ಪ್ರವೀಣ ದೊಡಮನಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.
ಸಂಪನ್ಮೂಲ ವ್ಯಕ್ತಿಗಳಾದ ವಿಟ್ಟಲ್ ಪಿಸೆ ಇವರು ಮಕ್ಕಳ ಆರೋಗ್ಯ ದೃಷ್ಟಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು ಹಾಗೂ ಮಕ್ಕಳಿಗೆ ದುಶ್ಚಟಗಳಿಂದ ದೂರ ವಿರುವಂತೆ ಪ್ರತಿಜ್ಞೆ ಮಾಡಿಸಿದರು. ಮುಖ್ಯ ಗುರುಗಳಾದ ಗಾಯತ್ರಿ ಪತ್ತಾರ ಇವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಕುರಿತು ಸಂತೋಷ ವ್ಯಕ್ತಪಡಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಸಹ ಶಿಕ್ಷಕರಾದ ಡಿ ಬಿ ಅತ್ತಾರ, ಸ್ವಾಗತ ಸಹ ಶಿಕ್ಷಕರು ಎಸ್ ಎಸ್ ಹೊಸಮನಿ, ವಂದನೆಯನ್ನು ಸಹ ಶಿಕ್ಷಕರು ಬಿಟಿ ನಾಯಕ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಒಕ್ಕೂಟದ ಪದಾಧಿಕಾರಿಗಳು ಸೇವಾ ಪ್ರತಿನಿಧಿಯಾದ ಗೀತಾ ಹಾಗೂ 110 ಶಾಲಾ ಮಕ್ಕಳು ಉಪಚಿತರಿದ್ದರು.