ಬಳ್ಳಾರಿ,ಜ.08=ರಕ್ತದಾನ ಶಿಬಿರವನ್ನು ಆಯೋಜಿಸುವ ಮೂಲಕ ಜೀವವನ್ನು ಉಳಿಸುವ ಕೆಲಸ ಯುವರೆಡ್ ಕ್ರಾಸ್ ಮಾಡುತ್ತಿದೆ ಎಂದು ವಿಜಯನಗರ ಶ್ರೀಕೃಷ್ಣದೇವರಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ ಮುನಿರಾಜು ಅವರು ಹೇಳಿದರು.
ಬುಧವಾರ ವಿಶ್ವವಿದ್ಯಾಲಯದ ಡಾ.ಬಿ.ಆರ್ ಅಂಬೇಡ್ಕರ್ ಸಭಾಂಗಣದಲ್ಲಿ ಬಳ್ಳಾರಿ ಯುವ ರೆಡ್ ಕ್ರಾಸ್ ಘಟಕ ಹಾಗೂ ವಿಶ್ವ ವಿದ್ಯಾಲಯದ ಅಧೀನದಲ್ಲಿ ಬರುವ ಮಹಾವಿದ್ಯಾಲಯಗಳ ರೆಡ್‌ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿಗಳಿಗೆ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ರಕ್ತದಾನ ಮಾಡುವುದರಿಂದ ವಿಶ್ವವಿದ್ಯಾಲಯದ ಕೀರ್ತಿ ಹೆಚ್ಚಾಗುತ್ತದೆ. ಒಬ್ಬ ವ್ಯಕ್ತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದಾಗಿದೆ. ಯುವಕರು ರಕ್ತದಾನ ಮಾಡಲು ಮುಂದಾಗಬೇಕು. ರಕ್ತದಾನದ ಮಾಡುವುದರಿಂದ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳಿವೆ. ಯುವ ಜನತೆ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿರಿ. ವಿವಿಯ ವ್ಯಾಪ್ತಿಯಲ್ಲಿ ಬರುವ ಕಾಲೇಜುಗಳಲ್ಲಿ ಹೆಚ್ಚು ರಕ್ತದಾನ ಮಾಡುವವರನ್ನು ವಿವಿಯ ವತಿಯಿಂದ ಅತ್ಯುತ್ತಮ ಗೌರವ ಪ್ರಶಸ್ತಿ ನೀಡುವುದಾಗಿ ಹೇಳಿದರು.
ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ಎಮ್.ಎ ಶಕೀಬ್ ಅವರು ಮಾತನಾಡಿ, ಕಾಲಕಾಲಕ್ಕೆ ರಕ್ತದಾನ ಮಾಡುವುದರಿಂದ ಆರೋಗ್ಯ ಸಮತೋಲನವಾಗಿರಲು ಸಹಾಯಕವಾಗುತ್ತದೆ ಎಂದರು.
ಬಳಿಕ ರೆಡ್ ಕ್ರಾಸ್ ಸಂಸ್ಥೆ ಬೆಳೆದು ಬಂದ ಹಾದಿ ಹಾಗೂ ಅದರ ಪ್ರಾಮುಖ್ಯತೆಯನ್ನು ತಿಳಿಸಿದರು.
ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಅಧೀನದಲ್ಲಿ ಬರುವ ಮಹಾವಿದ್ಯಾಲಯಗಳ ರೆಡ್‌ಕ್ರಾಸ್ ಘಟಕದ 100ಕ್ಕು ಹೆಚ್ಚು ಕಾರ್ಯಕ್ರಮಾಧಿಕಾರಿಗಳು ಉಪಸ್ಥಿತರಿದ್ದರು.
ವಿವಿಯ ಯುವ ರೆಡ್ ಕ್ರಾಸ್ ನೋಡಲ್ ಅಧಿಕಾರಿ ಡಾ.ರಾಜೇಂದ್ರ ಪ್ರಸಾದ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ವಂದಿಸಿದರು. ಮೇಘರಾಜ ಅತಿಥಿಗಳನ್ನು ಸ್ವಾಗತಸಿದರು.
ಕಾರ್ಯಕ್ರಮದಲ್ಲಿ ವಿವಿಯ ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು