ಬಳ್ಳಾರಿ..30- ಇಂದಿನ ತಂತ್ರಜ್ಞಾನ ಯುಗದಲ್ಲಿ ವೈಯಕ್ತಿಕ ಮಾಹಿತಿಯನ್ನು ಸಂರಕ್ಷಿಸಿಕೊಳ್ಳುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಇಂಗ್ಲೀಷ್ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ.ರಾಬರ್ಟ್ ಜೋಸ್ ಅವರು ಹೇಳಿದರು.
ಗುರುವಾರ, ವಿವಿ ಯ ಡಾ.ಬಿ.ಆರ್ ಅಂಬೇಡ್ಕರ್ ಸಭಾಂಗಣದಲ್ಲಿ ವಿವಿಯ ಆಂತರಿಕ ದೂರು ಸಮಿತಿ (ಐಸಿಸಿ) ಯಿಂದ ಆಯೋಜಿಸಿದ್ದ ಚರ್ಚಾಸ್ಫರ್ಧೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಎಐ ತಂತ್ರಜ್ಞಾನದ ಮೂಲಕ ಅನೇಕ ತೊಂದರೆ ಅನುಭವಿಸುವ ಪರಿಸ್ಥಿತಿ ಮಾನವನಿಗೆ ಎದುರಾಗಿದೆ. ಸ್ತಿçà ಸಮಾನತೆಯಿಂದ ಇಂದು ಮಹಿಳೆಯರು ಹಲವಾರು ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದಾರೆ. ಪ್ರಸ್ತುತವಾಗಿ ಪುರುಷ ಕ್ರಾಂತಿ ಆಗಬೇಕಿದೆ ಎಂದು ಅಭಿಪ್ರಾಯಪಟ್ಟರು.
ವಿವಿಯ ರಸಾಯನಶಾಸ್ತç ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ.ಅರುಣ್ ಕುಮಾರ ಲಗಶೆಟ್ಟಿ ಅವರು ಮಾತನಾಡಿ, ದೇಶದಲ್ಲಿ ಮಹಿಳಾ ಕಾನೂನುಗಳು ಬಲಿಷ್ಠವಾಗಿದ್ದು, ಸಮಾಜದಲ್ಲಿ ಮಹಿಳೆಯರನ್ನು ಗೌರವಿಸುವ ಮನೋಭಾವನೆ ಬೆಳೆಸಿಕೊಳ್ಳುವ ಅಗತ್ಯತೆ ಇದೆ ಎಂದು ಹೇಳಿದರು.
ಕಾರ್ಯಕ್ರಮದ ಸಂಯೋಜಕರು ಮತ್ತು ಐಸಿಸಿ ನಿರ್ದೇಶಕರಾದ ಪ್ರೊ.ಗೌರಿ ಮಾಣಿಕ್ ಮಾನಸ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ‘ಸೈಬರ್ ಭದ್ರತಾ ವ್ಯವಸ್ಥೆಗಳು ಸೇವಾ ಸ್ಥಳದಲ್ಲಿ ಪೋಶ್ ಕಾಯ್ದೆಯ ಅನುಷ್ಠಾನ ಮತ್ತು ಬಲಪಡಿಸುವಿಕೆಯಲ್ಲಿ ಪರಿಣಾಮಕಾರಿಯಾಗಿವೆಯೆ?” ಎಂಬ ವಿಷಯದ ಕುರಿತು ಚರ್ಚಾಸ್ಪರ್ಧೆ ಜರುಗಿತು.
ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕುರಿತು ಪ್ರಮಾಣವಚನವನ್ನು ಪ್ರೊ.ಮೇಧಾವಿನಿ ಕಟ್ಟಿ ಅವರು ಬೋಧಿಸಿದರು.
ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿ ಭೌತಶಾಸ್ತç ವಿಭಾಗದ ಮುಖ್ಯಸ್ಥ ಪ್ರೊ.ಉದಯಕುಮಾರ್ ಖಡ್ಕೆ ವೇದಿಕೆಯಲ್ಲಿದ್ದರು. ವಿಶ್ವವಿದ್ಯಾಲಯದ ವಿವಿಧ ನಿಕಾಯಗಳ ಡೀನರು, ಮುಖ್ಯಸ್ಥರುಗಳು, ಬೋಧಕ-ಬೋಧಕೇತರ ಸಿಬ್ಬಂದಿ, ಸಂಶೋಧನಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರಸ್ತುತವಾಗಿ ಪುರುಷ ಕ್ರಾಂತಿ ಆಗಬೇಕಿದೆ : ಪ್ರೊ.ರಾಬರ್ಟ್ ಜೋಸ್


